ಬುಧವಾರ, ಮೇ 18, 2022
28 °C

ಸ್ವಾತಂತ್ರ್ಯ ಹೋರಾಟಗಾರ ಶರಣಬಸವರಾಜ ಹದ್ಲಿ ಬಿಸರಳ್ಳಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರ, ವಿಮೋಚನಾ ಚಳವಳಿಯ ಮುಂದಾಳು, ನಿವೃತ್ತ ಶಿಕ್ಷಕ, ಸ್ವಾತಂತ್ರ್ಯ ಹೋರಾಟಗಾರ ಶರಣಬಸವರಾಜ ಹದ್ಲಿ ಬಿಸರಳ್ಳಿ (94) ವಯೋ ಸಹಜ ಕಾಯಿಲೆಯಿಂದ ಹುಬ್ಬಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಬಿಸರಳ್ಳಿ ಅವರು ಹಂಪಿ ಕನ್ನಡ ವಿವಿಯಿಂದ ತಮ್ಮ 84ನೇ ವಯಸ್ಸಿನಲ್ಲಿ ಪಿಎಚ್‌ಡಿ ಪದವಿ ಪಡೆದು ದೇಶದ ಗಮನ ಸೆಳೆದಿದ್ದರು. ಅಧ್ಯಯನಶೀಲರಾಗಿದ್ದ ಅವರು ಕೆಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಟ್ರಸ್ಟ್ ರಚಿಸಿ ಅದರ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದರು.

ತಾಲ್ಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು