ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸಲು ತಂಗಡಗಿ ತಂತ್ರ: ದಢೇಸೂಗೂರು ಆರೋಪ

Published 27 ಮಾರ್ಚ್ 2024, 16:00 IST
Last Updated 27 ಮಾರ್ಚ್ 2024, 16:00 IST
ಅಕ್ಷರ ಗಾತ್ರ

ಕೊಪ್ಪಳ: ‘ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರನ್ನು ಸೋಲಿಸುವ ಉದ್ದೇಶದಿಂದಲೇ ಸಚಿವ ಶಿವರಾಜ ತಂಗಡಗಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಹಿಟ್ನಾಳ ಸೋಲಿಗೆ ಹೀಗೆ ಪರೋಕ್ಷವಾಗಿ ತಂತ್ರ ಹೆಣೆದಿದ್ದಾರೆ’ ಎಂದು ಬಿಜೆಪಿಯ ಮಾಜಿ ಶಾಸಕ ಬಸವರಾಜ ದಢೇಸೂಗೂರು ಆರೋಪಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಉದ್ಯೋಗ ಕೇಳಿದವರನ್ನು ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯುವಕರು ಹಾಗೂ ವಿದ್ಯಾರ್ಥಿಗಳು ಈಗಲೂ ಮೋದಿ ಮೋದಿ ಎಂದರೆ ಅವರನ್ನು ಕಪಾಳಕ್ಕೆ ಹೊಡೆಯಬೇಕು ಎಂದು ತಂಗಡಗಿ ಹೇಳಿದ್ದಾರೆ. ಜಗತ್ತೇ ಮೋದಿ ಅವರನ್ನು ಹೊಗಳುತ್ತಿರುವಾಗ ಜನರನ್ನು ರೊಚ್ಚಿಗೆಬ್ಬಿಸಲು ಈ ರೀತಿಯ ಹೇಳಿಕೆ ನೀಡಿದ್ದು ಸರಿಯೇ’ ಎಂದರು.

’ತಂಗಡಗಿ ಹೇಳಿಕೆ ನೀಡುತ್ತಿದ್ದಂತೆಯೇ ಜನರಲ್ಲಿ ಆಕ್ರೋಶ ಉಂಟಾಗಿದೆ. ಜನರ ಭಾವನೆಗಳಿಗೆ ಬೆಲೆ ನೀಡಿ ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು. ತಂಗಡಗಿ ಸಚಿವರಾದ ಪ್ರತಿ ಅವಧಿಯಲ್ಲಿಯೂ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಅಟ್ರಾಸಿಟಿ ಪ್ರಕರಣಗಳು ಹೆಚ್ಚಾಗುತ್ತಿವೆ. ಯಾರು ತಮ್ಮ ವಿರುದ್ಧ ಹೋರಾಟ ಮಾಡುತ್ತಾರೊ ಅವರನ್ನು ಹೆಣೆಯಲು ಪ್ರಕರಣ ದಾಖಲಿಸುವ ತಂತ್ರ ಮುಂದಿಡುತ್ತಾರೆ’ ಎಂದು ಆಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT