ಗಂಗಾವತಿ (ಕೊಪ್ಪಳ ಜಿಲ್ಲೆ): ‘ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಜಾಗದಲ್ಲಿ ಮೂತ್ರವಿಸರ್ಜನೆ ಮಾಡಬಾರದು ಎಂದು ಬುದ್ದಿವಾದ ಹೇಳಿದಕ್ಕೆ ಯುವಕನೊಬ್ಬ ನಗರದ ಹಿರಿಯ ವಕೀಲ ಪ್ರಭಾಕರ ಹೊಸಕೇರಿ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ರಾತ್ರಿ ಬಂಬೂ ಬಜಾರಿನಲ್ಲಿ ಜರುಗಿದೆ. ಹಲ್ಲೆ ಮಾಡಿದ್ದು ಜಮೀರ್ ಎಂದು ತಿಳಿದು ಬಂದಿದ್ದು, ಸದ್ಯ ಯುವಕನನ್ನ ವಶಕ್ಕೆ ಪಡೆದು ನಗರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

ವಕೀಲ ಪ್ರಭಾಕರ್ ಹೊಸಕೇರಿ ದಂಪತಿ ಅವರ ಪುತ್ರ ಆಸ್ಪತ್ರೆಯಿಂದ ಮನೆಗೆ ತೆರಳುವ ಸಾರ್ವಜನಿಕ ರಸ್ತೆಯಲ್ಲಿ ಯುವಕ ಮೂತ್ರವಿಸರ್ಜನೆ ಮಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಬಾರದು. ಇಲ್ಲಿ ಮಹಿಳೆಯರು ಓಡಾಡುತ್ತಾರೆ ಎಂದು ಬುದ್ಧಿವಾದ ಹೇಳಿ ಮುಂದೆ ಸಾಗಿದ್ದರು.

ದಂಪತಿ ತುಸು ಮುಂದೆ ಸಾಗಿದ್ದ ನಂತರ ಮುಸ್ಲಿಂ ಯುವಕ ಹಿಂಬದಿಯಿಂದ ಬಂದು ವಕೀಲರ ಮೇಲೆ ಹಲ್ಲೆ ನಡೆಸಿ ಗಲಾಟೆ ಮಾಡಿ ಹಲವರನ್ನು ಕರೆಯಿಸಿ ಮತ್ತೆ ಹಲ್ಲೆ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು ಅಲ್ಲಿಂದ ಯುವಕ ಕಾಲ್ಕಿತ್ತಿದ್ದಾನೆ ಎಂದು ಸ್ಥಳೀಯರು ತಿಳಿಸಿದರು.

ಘಟನೆ ತಿಳಿಯುತ್ತಿದ್ದಂತೆ ಮಾಜಿ ಶಾಸಕ ಪರಣ್ಣ ಮುನವಳ್ಳಿ, ವಕೀಲರು, ಹಿಂದೂಪರ ಸಂಘಟನೆಗಳ ಮುಖಂಡರು ಪೊಲೀಸ್ ಠಾಣೆಗೆ ತೆರಳಿ ಡಿವೈಎಸ್ಪಿ ಜೊತೆ ಚರ್ಚಿಸಿದರು. ಯುವಕನನ್ನು ಬಂಧಿಸುವ ತನಕ ಠಾಣೆ ಬಿಟ್ಟು ಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಆಗ ಮಾತಿನ ಚಕಮಕಿಯೂ ನಡೆಯಿತು. ಘಟನೆಯ ನಂತರ ಕೆಲವೇ ಗಂಟೆಗಳಲ್ಲಿ ಹಲ್ಲೆ ನಡೆಸಿದ ಯುವಕನನ್ನು ವಶಕ್ಕೆ ಪಡೆಯಲಾಗಿದೆ.

ಈ ವೇಳೆ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ನಾಯಕ, ಹಿರಿಯ ವಕೀಲರಾದ ಪ್ರಕಾಶ ಕೋರಿಶೆಟ್ಟರ್, ಶರದ್ ದಂಡಿನ್, ಮಲ್ಲಿಕಾರ್ಜುನ ಮುಸಾಲಿ, ಮಂಜುನಾಥ ಎಚ್. ಎಂ ಸೇರಿ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.