ಗಂಗಾವತಿ: ವಿದ್ಯಾರ್ಥಿಗಳಲ್ಲಿ ನಾಡಿನ ಸಾಹಿತ್ಯ, ಸಂಸ್ಕೃತಿ, ಸಂಪ್ರದಾಯ, ಜನಪದ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯ. ಅವುಗಳನ್ನು ಮುಂದಿನ ಪೀಳಿಗೆಗಳಿಗೆ ಉಳಿಸಿ, ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ ಜಿಲ್ಲಾ ಸಂಚಾಲಕ ರಮೇಶ ಗಬ್ಬೂರ್ ಹೇಳಿದರು.

ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಸಹಯೋಗದಲ್ಲಿ ಶನಿವಾರ ನಡೆದ ಜನರ ಜಾನಪದ ಗೀತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ವಿದ್ಯಾವರ್ಧಕ ಸಂಘವು ಅನೇಕ ವರ್ಷಗಳಿಂದ ನಾಡು, ನುಡಿ, ಸಂಸ್ಕೃತಿ, ಸಂಪ್ರದಾಯವನ್ನು ಹೋರಾಟ, ಚಳುವಳಿಯ ಮೂಲಕ ರಕ್ಷಣೆ ಮಾಡುತ್ತಾ ಬರುತ್ತಿದೆ. ಹಾಗೇ ಸರ್ಕಾರದ ಸಹಾಯ ಧನದಲ್ಲಿ ಕಾರ್ಯಕ್ರಮಗಳು ಆಯೋಜಿಸುತ್ತಾ ಅರಿವು ಮೂಡಿಸುತ್ತಿದೆ’ ಎಂದರು.

ಪ್ರಾಚಾರ್ಯ ಬಸಪ್ಪ ನಾಗೋಲಿ, ಉಪನ್ಯಾಸಕ ಚಂದ್ರಶೇಖರ, ಲಿಂಗಣ್ಣ ಜಂಗಮರಹಳ್ಳಿ, ಅಜಗರ್ ಪಾಶ, ರಮಾ ಇದ್ದರು. ಉಪನ್ಯಾಸಕಿ ಸಾವಿತ್ರಿ ನಿರೂಪಿಸಿದರು. ಉಪನ್ಯಾಸಕಿ ಲಕ್ಷ್ಮಿ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-35-1228845427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.