ಗಂಗಾವತಿ: ನಗರದಲ್ಲಿ ಗುರುವಾರ ರಾತ್ರಿ ಗಾಳಿ ಸಹಿತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದಾಗಿ ನಗರದ ಹಲವು ವಾರ್ಡ್ಗಳಲ್ಲಿ ರಸ್ತೆಗಳು ಜಲಾವೃತಗೊಂಡರೆ, ಚರಂಡಿಗಳು ಕಟ್ಟಿಕೊಂಡು ರಸ್ತೆ ಮೇಲೆ ಕೊಳಚೆ ಹರಿದಿದೆ.

ಇದರಿಂದ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು. ಕೆಲವು ಪ್ರದೇಶಗಳಲ್ಲಿ ಮನೆಗಳ ಮುಂದೆ ನೀರು ಸಂಗ್ರಹಗೊಂಡ ನಿವಾಸಿಗಳು ಪರದಾಡುವಂತಾಯತು.

ಮಳೆಯಿಂದ ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆ ಮಕ್ಕಳ ಉದ್ಯಾನವನಕ್ಕೆ ಚರಂಡಿ ನೀರು ನುಗ್ಗಿ ಪಾರ್ಕ್ ಸಂಪೂರ್ಣ ಜಲಾವೃತಗೊಂಡಿದೆ. ಉದ್ಯಾನವನದ ಒಳಭಾಗದಲ್ಲಿ ನೀರು ನಿಂತಿರುವುದರಿಂದ ಸಾರ್ವಜನಿಕರ ಪ್ರವೇಶಕ್ಕೂ ಅಡಚಣೆ ಉಂಟಾಗಿದೆ.

ಪರಿಸ್ಥಿತಿಯನ್ನು ಗಮನಿಸಿದ ನಗರಸಭೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಜೆಸಿಬಿ ಯಂತ್ರಗಳ ಮೂಲಕ ಚರಂಡಿಗಳ ಸ್ವಚ್ಛತಾ ಕಾರ್ಯ ನಡೆಸಿದರು. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಚರಂಡಿಗಳ ನಿರಂತರ ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-35-560775645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.