ಗಂಗಾವತಿ: ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಕರವೇ(ನಾರಾಯಣಗೌಡ ಬಣ) ಸಂಘಟನೆ ಸದಸ್ಯರು, ನಗರಠಾಣೆ ಪಿಐ ಪ್ರಕಾಶ ಆರ್. ಯಾತನೂರು ಅವರಿಗೆ ಮನವಿ ಸಲ್ಲಿಸಿದರು.

ಕರವೇ(ನಾರಾಯಣಗೌಡ ಬಣ) ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಗಿಣಿಮೋತಿ ಮಾತನಾಡಿ, ‘ತಾಲ್ಲೂಕಿನ ಸಿಎಲ್-2 ಸನ್ನದುದಾರರು ರಾಜಾರೋಷವಾಗಿ ಮದ್ಯ ಸರಬರಾಜು ಮಾಡುತ್ತಿದೆ. ಮದ್ಯದ ಬೆಲೆ ರೇಟ್ ಬೋರ್ಡ್ಗಳು ಇಲ್ಲ. ಮದ್ಯಪ್ರಿಯರಿಗೆ ಮೋಸ ಮಾಡಲಾಗುತ್ತಿದೆ. ಗ್ರಾಮೀಣ ಮತ್ತು ನಗರ ಭಾಗದ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಯುವಜನರು ಮದ್ಯಕ್ಕೆ ದಾಸರಾಗಿ ಜೀವನ ಹಾಳು ಮಾಡುಕೊಳ್ಳುತ್ತಿದ್ದಾರೆ. ಈ ಬಗ್ಗೆ ಮೇ 18ಕ್ಕೆ ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಮನವಿ ಸಲ್ಲಿಸಲಾಗಿದೆ. ಆದರೂ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿನ ಡಾಬಾ, ಪಾನ್ ಬೀಡಾ ಅಂಗಡಿ, ಸಣ್ಣಸಣ್ಣ ಕಿರಾಣಿ ಅಂಗಡಿಗಳಲ್ಲಿ ಕದ್ದು ಮುಚ್ಚಿ ಅಕ್ರಮವಾಗಿ ಬಿಯರ್, ವೈನ್ ವ್ಯಾಪಾರ ನಡೆಯುತ್ತಿದೆ. ಅದರ ವಿರುದ್ಧ ಕ್ರಮಜರುಗಿಸಬೇಕು’ ಎಂದು ಒತ್ತಾಯಿಸಿದರು.

ಕರವೇ(ನಾರಾಯಣಗೌಡ ಬಣ) ಸಂಘಟನೆ ತಾಲ್ಲೂಕು ಉಪಾಧ್ಯಕ್ಷ ನಿಸಾರ್, ತಾಲ್ಲೂಕು ಕಾರ್ಯದರ್ಶಿ ಅಂಜನಿ ಗೊರೂರು, ಪ್ರವೀಣಕುಮಾರ, ಸಾ.ಜಾ. ತಾಲ್ಲೂಕು ಸಂಚಾಲಕ ಶಬ್ಬೀರ್ ಪಾಶಾ, ನಗರ ಘಟಕದ ಪದಾಧಿಕಾರಿ ಹೇಮಂತಕುಮಾರ ಹೊಸ್ಕೆರಾ, ಅಜಯಕುಮಾರ, ಬಸಣ್ಣ ಕಲ್ಲುಡಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-35-1767154312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.