ಗಂಗಾವತಿ: ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದರ ಕುರಿತು ಕನ್ನಡಪರ ಸಂಘಟನೆಗಳ ಮುಖಂಡರು ನೀಡಿದ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು, ಪಡಿತರ ಅಕ್ಕಿ ತುಂಬಿದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಬೂದಗುಂಪ ಕ್ರಾಸ್ನಿಂದ ಗಂಗಾವತಿ ಮಾರ್ಗವಾಗಿ ಬರುತ್ತಿದ್ದ ಲಾರಿ ತಡೆದು ವಿಚಾರಣೆ ನಡೆಸಿ, ಅಕ್ಕಿ ಪರಿಶೀಲಿಸಿದ ಸಮಯದಲ್ಲಿ ಪಡಿತರ ಅಕ್ಕಿ ಎಂದು ಸಾಬೀತಾಗಿದೆ. ಕೂಡಲೇ ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ 35 ಟನ್ ಅಕ್ಕಿಪತ್ತೆಯಾಗಿದೆ. ನಂತರ ಕನ್ನಡ ಪರ ಸಂಘಟನೆಯವರು ಪ್ರಕರಣ ದಾಖಲಿಸಲು ಒತ್ತಾಯಿಸಿದ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು, ನಗರಠಾಣೆಯಲ್ಲಿ ದೂರು ನೀಡಿದ್ದಾರೆ. ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ಸಂಗ್ರಹ ಮಾಡಲಾಗಿದ್ದು, ಅಧಿಕಾರಿಗಳು ಪಡಿತರ ಅಕ್ಕಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-35-1425506476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.