ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ | ಕುಡಿಯುವ ನೀರು ಸಮಸ್ಯೆ: ಸಹಾಯವಾಣಿ ಆರಂಭ

Published 21 ಫೆಬ್ರುವರಿ 2024, 15:51 IST
Last Updated 21 ಫೆಬ್ರುವರಿ 2024, 15:51 IST
ಅಕ್ಷರ ಗಾತ್ರ

ಗಂಗಾವತಿ: ‘ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವವಿದ್ದು ಮುಂಜಾಗ್ರತಾ ಕ್ರಮವಾಗಿ ನಗರಸಭೆ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಸಾರ್ವಜನಿಕರು ಕರೆ ಮಾಡಿ ಮಾಹಿತಿ ಪಡೆಯಬಹುದು’ ಎಂದು ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ ತಿಳಿಸಿದ್ದಾರೆ.

‌‘ಬರದ ಪರಿಣಾಮ ನಗರದ 35 ವಾರ್ಡ್‌ಗಳಿಗೆ ನೀರು ಪೂರೈಸಲು ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ನದಿ ಪಾತ್ರದಲ್ಲಿ ನೀರಿನ ಸಮಸ್ಯೆ ಇರುವ ಕಾರಣ ಕೆಲವೊಮ್ಮೆ ವಿದ್ಯುತ್ ವ್ಯತ್ಯಯದಿಂದ ನೀರು ಪೂರೈಕೆಯಲ್ಲಿ ಏರುಪೇರು ಆಗಬಹುದು. ಕುಡಿಯುವ ನೀರಿ‌ನ ಸಮಸ್ಯೆ ಎದುರಾದರೆ ನಗರಸಭೆ ಕಾರ್ಯಾಲಯದ 8050428081, 08533-230240 ಕರೆ ಮಾಡಿ ದೂರು ನಮೂದಿಸಿದರೆ ಕೂಡಲೇ ಸಮಸ್ಯೆ ಪರಿಹರಿಸಲಾಗುತ್ತದೆ‘ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT