ಗಂಗಾವತಿ: ತಾಲ್ಲೂಕಿನ ಸಂಗಾಪುರ ಗ್ರಾಮ ಪಂಚಾಯಿತಿ ಪಿಡಿಒ ಅವರು ಉದ್ಯೋಗ ಖಾತ್ರಿ ಕೂಲಿಕಾರರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಸಾಯಿನಗರದ ಕೂಲಿಕಾರರು ಬುಧವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಮುತ್ತಣ್ಣ ದಾಸನಾಳ ಮಾತನಾಡಿ, ‘ಸಂಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಯಿನಗರ ಗ್ರಾಮದ 169 ಜನ ಕೂಲಿಕಾರರಿಗೆ ಎನ್ಎಂಆರ್ ಹಾಜರಾತಿ ಹಾಕಿದ್ದೂ, ಇದರಲ್ಲಿ ಕೇವಲ 24 ಜನರಿಗೆ ಮಾತ್ರ ಉದ್ಯೋಗ ಖಾತ್ರಿ ಕೆಲಸ ನೀಡಲಾಗುತ್ತಿದೆ. ನರೇಗಾ ಕೆಲಸ ನಂಬಿ ಜೀವನ ನಡೆಸುತ್ತಿದ್ದ,ಬಡ ಕೂಲಿಕಾರರಿಗೆ ಪಿಡಿಒ ಉದ್ದೇಶಪೂರ್ವಕವಾಗಿ ಕೆಲಸ ನಿರಾಕರಿಸುತ್ತಿರುವುದು ಖಂಡನೀಯ’ ಎಂದರು.

‘ಗ್ರಾಮೀಣ ಭಾಗದ ಪ್ರತಿಯೊಂದು ಕುಟುಂಬ ವರ್ಷಕ್ಕೆ 100 ದಿನಗಳ ಕೆಲಸ ನೀಡುವುದು ಉದ್ಯೋಗ ಖಾತ್ರಿ ಕೆಲಸದ ಕಾನೂನು. ಸಂಗಾಪುರ ಗ್ರಾಪಂ ಪಿಡಿಒ ಮಾತ್ರ ಎಲ್ಲ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪಿಡಿಒ ವಿರುದ್ಧ ಕ್ರಮ ಜರುಗಿಸಿ ವರ್ಗಾವಣೆ ಮಾಡಬೇಕು’ ಎಂದು ಆಗ್ರಹಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಶಿವಣ್ಣ ಬೆಣಕಲ್, ದುರುಗಪ್ಪ ಪೂಜಾರಿ, ಶಂಕರ್ ಸಂಗಾಪುರ, ಮಂಜುನಾಥ ಡಗ್ಗಿ ಸೇರಿದಂತೆ ಸಾಯಿನಗರದ ನೂರಾರು ಕೂಲಿಕಾರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-35-1602469484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.