ಗಂಗಾವತಿ: ಪಾದಚಾರಿ ರಸ್ತೆಗಳ ತೆರವು ನೆಪದಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸಲು ಮುಂದಾಗಿರುವುದನ್ನು ಖಂಡಿಸಿ ಮೇ 19ರಂದು ಡಿಎಸ್ಎಸ್ ಭೀಮವಾದ ಸಂಘಟನೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ಮರಿಸ್ವಾಮಿ ಬರಗೂರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಗರಸಭೆ ಅಧಿಕಾರಿಗಳು ಪಾದಚಾರಿ ಮಾರ್ಗ ತೆರವು ನೆಪದಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸಿದ್ದಾರೆ. ಆದರೆ ಪಾದಚಾರಿ ರಸ್ತೆ ಒತ್ತುವರಿ ಮಾಡಿದ ಕೆಲ ಪ್ರಭಾವಿಗಳ ಆಸ್ತಿ ಹಾಗೇ ಬಿಟ್ಟಿದ್ದಾರೆ. ನ್ಯಾಯಾಲಯ ಆದೇಶದಂತೆ ಅಧಿಕಾರಗಳು ಕೆಲಸ ಮಾಡಿದ್ದು ಸ್ವಾಗತ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗ ಗುರುತಿಸಿ, ವ್ಯಾಪಾರ ಮಾಡಲು ಅನುಕೂಲ ಮಾಡಿಕೊಟ್ಟಿಲ್ಲ’ ಎಂದು ಆರೋಪಿಸಿದರು.

‘ಗಂಗಾವತಿ ನಗರದಲ್ಲಿ 1600ಕ್ಕೂ ಹೆಚ್ಚು ಕುಟುಂಬಗಳು ಬೀದಿ ಬದಿಯಲ್ಲಿ ಹೊಟೆಲ್ ನಡೆಸಿಕೊಂಡು ಜೀವನ ನಡೆಸುತ್ತಿದ್ದಾರೆ. ಪಾದಚಾರಿ ಮಾರ್ಗ ಒತ್ತುವರಿ ತೆರವಿನ ಕಾರಣ ಎಲ್ಲರೂ ಬೀದಿಗೆ ಬಂದಿದ್ದಾರೆ. ನಗರಸಭೆ ಅಧಿಕಾರಿಗಳು ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ನಗರಸಭೆ ಎದುರು ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಬೀದಿಬದಿ ವ್ಯಾಪಾರಿ ರಾಘವೇಂದ್ರ ಬೋವಿ, ಲಕ್ಷಮ್ಮ, ಅನ್ನಪೂರ್ಣ, ಗೌಸ್, ಶಿವಕುಮಾರ, ರಾಜಣ್ಣ ಸೇರಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-35-555637703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.