ಗಂಗಾವತಿ: ಇಲ್ಲಿನ ಬೀದಿಬದಿ ವ್ಯಾಪಾರಸ್ಥರಿಗೆ ಪಾದಚಾರಿ ಮಾರ್ಗದ ಮೇಲೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ, ಮಂಗಳವಾರ ಸಿಐಟಿಯು, ಎಐ ಸಿಸಿಟಿಯು ಹಾಗೂ ಕೆಡಿಎಸ್ಎಸ್(ಭೀಮವಾದ) ಸಂಘಟನೆ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಸ್ಥರು ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಿಐಟಿಯು ಸಂಘಟನೆ ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ‘ಹಲವು ವರ್ಷಗಳಿಂದ ಬೀದಿಬದಿ ವ್ಯಾಪಾರಸ್ಥರು ಪಾದಚಾರಿ ಮಾರ್ಗ, ರಸ್ತೆ ಸಮೀಪ, ವೃತ್ತಗಳ ಓಣಿಗಳಲ್ಲಿ ಫಾಸ್ಟ್ಫುಡ್, ತರಕಾರಿ, ಉಪಹಾರ, ಚಪ್ಪಲಿ, ಗೋಬಿ, ಜಿಲೆಬಿ, ಹೂವು, ತೆಂಗನಕಾಯಿ ಮಾರಾಟ ಮಾಡುತ್ತ, ಬಂದ ಹಣದಿಂದ ಕುಟುಂಬ ನಿರ್ವಹಣೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ’ ಎಂದು ಹೇಳಿದರು.

‘ಇದೀಗ ನ್ಯಾಯಾಲಯ ಆದೇಶದಂತೆ ನಗರಸಭೆ ಅಧಿಕಾರಿಗಳು ಪಾದಚಾರಿ ಮಾರ್ಗದ ಮೇಲೆ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸಿ, ವಕ್ಕಲೆಬ್ಬಿಸುವ ಕೆಲಸ ಮಾಡಿದ್ದಾರೆ. ಇದರಿಂದ ಸಾಕಷ್ಟು ಜನ ಬೀದಿಬದಿ ವ್ಯಾಪಾರಿಗಳಿಗೆ ಕೆಲಸವಿಲ್ಲದೆ, ಬದುಕು ಮುರಾ ಬಟ್ಟೆಯಾಗಿದೆ. ಹೀಗಾಗಿ ವ್ಯಾಪಾರಸ್ಥರಿಗೆ, ಪಾದಚಾರಿ ಮಾರ್ಗದ ಮೇಲೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಹೇಳಿದರು.

ಬೀದಿಬದಿ ವ್ಯಾಪಾರಸ್ಥ ಯಲ್ಲಪ್ಪ ಮಾತನಾಡಿ, ‘ಹಲವು ವರ್ಷಗಳಿಂದ ಗಂಗಾವತಿ ನಗರದಲ್ಲಿ ಪಾದಚಾರಿ ಮಾರ್ಗದ ಬಳಿ ವ್ಯಾಪಾರ ಮಾಡಿಕೊಳ್ಳುತ್ತ ಬಂದಿದ್ದೇನೆ. ಇದೀಗ ಪಾದಚಾರಿ ಮಾರ್ಗದ ಬಳಿನ ಎಲ್ಲ ಬಂಡಿಗಳ ತೆರವಿನ ನಂತರ ವ್ಯಾಪಾರ ಮಾಡಲು ಜಾಗವಿಲ್ಲ. ಬದುಕು ಕಷ್ಟವಾಗುತ್ತಿದೆ. ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆ ನಡೆಸಲು ಹಣವೇ ಇಲ್ಲದಂತಾಗಿದೆ. ಹೀಗಾಗಿ ವ್ಯಾಪಾರ ಮಾಡಲು ನಗರಸಭೆ ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ನಂತರ ಎಲ್ಲ ಸಂಘಟನೆಗಳ ಮುಖಂಡರು, ಬೀದಿಬದಿ ವ್ಯಾಪಾರಿಗಳು ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು.

ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ್ ದೊರೆರಾಜು, ಸಣ್ಣ ಹನುಮಂತ, ಭೀಮವಾದ ಸಂಘಟನೆ ಜಿಲ್ಲಾಧ್ಯಕ್ಷ ಮರಿಸ್ವಾಮಿ ಬರಗೂರು, ಮಂಜುನಾಥ ಡಗ್ಗಿ, ಸೈಯದ್ ಬೂರಾನೂದ್ದೀನ್, ಮಂಜುನಾಥ, ಬಸವರಾಜ, ಯಲ್ಲಪ್ಪ, ಹುಲಗಪ್ಪ, ಮಾರೆಮ್ಮ, ಉಮಾದೇವಿ, ಬಸ್ಸ್ಟ್ಯಾಂಡ್ ಶಂಕ್ರಮ್ಮ ಸೇರಿ ಬೀದಿಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-35-752727640

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.