ಶನಿವಾರ, ಸೆಪ್ಟೆಂಬರ್ 25, 2021
22 °C

ಗಂಗಾವತಿ: ತಹಶೀಲ್ದಾರ್ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ: ತಾಲ್ಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಮರಳು ಸಾಗಾಣಿಕೆಗೆ ಬೆಂಬಲ ನೀಡುತ್ತಿರುವ ಆರೋಪದ ಮೇಲೆ ತಹಶೀಲ್ದಾರ್ ಎಂ.ರೇಣುಕಾ ಅವರನ್ನು ಮಂಗಳವಾರ ಅಮಾನತು ಮಾಡಲಾಗಿದೆ.

‘ತಾಲ್ಲೂಕಿನ ಆನೆಗೊಂದಿ, ಮಲ್ಲಾಪೂರ, ಸಂಗಾಪೂರ ಗ್ರಾಮಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ, ಅದನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಮರಳು ಅಕ್ರಮ ಸಾಗಾಣಿಕೆ ಮಾಡಲು ಟ್ರ್ಯಾಕ್ಟರ್ ಮಾಲೀಕರಿಂದ ಪ್ರತಿ ತಿಂಗಳಿಗೆ ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೊ ಡಿ.22ರಂದು ವೈರಲ್ ಆಗಿತ್ತು. ಗಣಿಗಾರಿಕೆಯಿಂದ ಸರ್ಕಾರಕ್ಕೆ ಬರಬೇಕಾದ ಆದಾಯವನ್ನು ಕೈತಪ್ಪುವಂತೆ ಮಾಡಿ, ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ. ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅಮಾನತು ಮಾಡಲಾಗಿದೆ’ ಎಂದು ಕಂದಾಯ ಇಲಾಖೆ ಆದೇಶದಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.