ಮಂಗಳವಾರ, ಏಪ್ರಿಲ್ 13, 2021
30 °C

ಗಂಗಾವತಿ: ತಾಲ್ಲೂಕು 7 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ: ತಾಲ್ಲೂಕು 7 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮೀಪದ ಜಂಗಮರ ಕಲ್ಗುಡಿಯಲ್ಲಿ ಭಾನುವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಸಮ್ಮೇಳನದ ಅಧ್ಯಕ್ಷರಾದ ಡಾ.ಮುಮ್ತಾಜ್ ಬೇಗಂ ದಂಪತಿಯನ್ನು ಪುಷ್ಪ ಹಾಗೂ ನಾಡ ಧ್ವಜಗಳಿಂದ ಅಲಂಕೃತಗೊಳಿಸಿದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಗ್ರಾಮದ ಆಂಜನೇಯ ದೇಗುಲದ ಸನ್ನಿಧಿಯಿಂದ ಆರಂಭಗೊಂಡ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಹಾಯ್ದು ಸಮ್ಮೇಳನ ಜರುಗುವ ಶ್ರೀ ಸಿ.ಎಚ್. ಸತ್ಯನಾರಾಯಣರವರ ಬಯಲು ಜಾಗದ ವೇದಿಕೆಗೆ ಆಗಮಿಸಿತು.

ಮೆರವಣಿಗೆ ಉದ್ದಕ್ಕೂ ಕುಂಭ ಮೆರವಣಿಗೆ ವಿವಿಧ ಕಲಾ ತಂಡಗಳಾದ ಡೊಳ್ಳು ಕುಣಿತ, ಕಂಸಾಳೆ, ಜನಪದ ಕಲಾ ತಂಡಗಳ ನೃತ್ಯ ಗಮನ ಸೆಳೆಯಿತು.

ಶಾಲಾ ಮಕ್ಕಳು, ಶಿಕ್ಷಕರು, ಕನ್ನಡ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಕನ್ನಡ ಬಾವುಟ ಹಿಡಿದುಕೊಂಡು ತಾಯಿ ಭುವನೇಶ್ವರಿ ಘೋಷಣೆ ಕೂಗಿ ಸಂಭ್ರಮಿಸಿದರು.

ಇದಕ್ಕೂ ಮೊದಲು ಸಮ್ಮೇಳನದ ವೇದಿಕೆ ಮುಂಭಾಗದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಡಿವೈಎಸ್ ಪಿ ರುದ್ರೇಶ ಉಜ್ಜನಿಕೊಪ್ಪ ಅವರು ನೆರವೇರಿಸಿದರು. ಕಸಾಪ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಅವರು ಪರಿಷತ್ ಧ್ವಜಾರೋಹಣ, ಕಸಾಪ ತಾಲ್ಲೂಕು ಅಧ್ಯಕ್ಷ ಎಸ್.ಬಿ.ಗೊಂಡಬಾಳ ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದರು.

ಈ ವೇಳೆ ಜಂಗಮರ ಕಲ್ಗುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಸಣ್ಣ ಯಮನೂರಪ್ಪ ನಾಯಕ್, ತಾ.ಪಂ ಅಧ್ಯಕ್ಷ ಮಹ್ಮದ್ ರಫಿ, ಎಪಿಎಂಸಿ ಅಧ್ಯಕ್ಷ ಚಂದ್ರೇಗೌಡ, ಕಳಕನಗೌಡ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು