ಗಂಗಾವತಿ: ತಾಲ್ಲೂಕಿನ ಬಸಾಪಟ್ಟಣ ಬಸಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಈಚೆಗೆ ಅಂಗವಿಕಲ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ, ಯುಡಿಐಡಿ ಕಾರ್ಡ್ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಬಸಾಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷ ಆಂಜನೇಯ ನಾಯಕ ಮಾತನಾಡಿ, ಸರ್ಕಾರ ಹಾಗೂ ವಿವಿಧ ಖಾಸಗಿ ಸಂಸ್ಥೆಗಳು ಅಂಗವಿಕಲರ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ, ಉಚಿತ ತಪಾಸಣಾ ಶಿಬಿರಗಳು ಆಯೋಜಿಸುತ್ತಿದ್ದು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಶೇ 5ರಷ್ಟು ಅನುದಾನ ಅಂಗವಿಕಲರಿಗೆ ಮೀಸಲಿದ್ದು, ಇದರ ಸೌಲಭ್ಯ ಸಹ ಪಡೆಯಬೇಕು. ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ ಮಾಡುತ್ತಿದ್ದು, ಆರ್ಹರು ಇವುಗಳನ್ನ ಪಡೆಯಬೇಕು ಎಂದರು.
ಗ್ರಾಮ ಪಂಚಾಯತಿ ಸದಸ್ಯೆ ಹುಲಿಗೆಮ್ಮ, ಮಹ್ಮದ್ ಹುಸೇನ್ ,ಬಸವರಾಜ, ಭಾಷಾಸಾಬ್ ಸೇರಿದಂತೆ ಅಂಗವಿಕಲರು, ಗ್ರಾಮ ಪಂಚಾಯತಿ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.