ಮಂಗಳವಾರ, ಆಗಸ್ಟ್ 3, 2021
21 °C

ಗಂಗಾವತಿ: ₹63 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾಸನಾಳ ಸೇತುವೆ ಬಳಿ ತುಂಗಭದ್ರಾ ಎಡದಂಡೆ ಕಾಲುವೆಗೆ ಸಿ.ಸಿ ಲೈನಿಂಗ್, ಆಧುನೀಕರಣ ಕಾಮಗಾರಿಗೆ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು

ಗಂಗಾವತಿ: ತಾಲ್ಲೂಕಿನ ದಾಸನಾಳ ಸೇತುವೆ ಸಮೀಪ ಕರ್ನಾಟಕ ನೀರಾವರಿ ನಿಗಮದಿಂದ ₹63 ಕೋಟಿ ವೆಚ್ಚದ ತುಂಗಭದ್ರಾ ಎಡದಂಡೆ ಕಾಲುವೆಗೆ ಸಿ.ಸಿ ಲೈನಿಂಗ್ ಹಾಗೂ ಆಧುನೀಕರಣ ಕಾಮಗಾರಿಗೆ ಶುಕ್ರವಾರ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, 24 ಕಿ.ಮೀ ಉದ್ದ ಎಡದಂಡೆ ಕಾಲುವೆ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ನಡೆಸಬೇಕು.  ಕಳಪೆ ಕಾಮಗಾರಿ ಮಾಡಬಾರದು ಎಂದರು.

ಮುಂದಿನ ಎರಡು ಅವಧಿಗೆ ರೈತರಿಗೆ ಯಾವುದೇ ರೀತಿಯ ನೀರಿನ ಕೊರತೆ ಹಾಗೂ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು.  ನೀರು ಕಳವು ಆಗುವುದರಿಂದ ಕಾಲುವೆ ಕೆಳಭಾಗದ ರೈತರಿಗೆ ಸಮಸ್ಯೆ ಆಗುತ್ತಿರುವುದು ಗಮನಕ್ಕಿದೆ. ಹೀಗಾಗಿ ನವಲಿ ಜಲಾಶಯ ನಿರ್ಮಾಣ ಮಾಡಲು ಡಿಪಿಆರ್‌ ಸಿದ್ಧಪಡಿಸಲಾಗಿತ್ತಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.