ಗಂಗಾವತಿ: ‘ಡಾ.ಬಿ.ಆರ್.ಅಂಬೇಡ್ಕರ್ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಶ್ರಮ, ಹೋರಾಟ ಸ್ಮರಿಸಿಕೊಳ್ಳುವುದು ದೇಶದ ಪ್ರತಿ ಪ್ರಜೆಯ ಆದ್ಯ ಕರ್ತವ್ಯ ಎಂದು ಶಾಸಕ ಜಿ.ಜನಾರ್ದನ ರೆಡ್ಡಿ ಹೇಳಿದರು ಎಂದು ಶಾಸಕ ಜಿ.ಜನಾರ್ದನ ರೆಡ್ಡಿ ಹೇಳಿದರು.

ನಗರದ ನೀಲಕಂಠೇಶ್ವರ ವೃತ್ತದ ಬಳಿನ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ನಡೆದ 135ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಅಂಬೇಡ್ಕರ್ ವಿಶ್ವಕ್ಕೆ ಸಮಾನತೆ ಸಾರಿದ ಮಹಾನ್ ಪುರುಷ. ಇವರು ರಚಿಸಿದ ಸಂವಿಧಾನದಿಂದಲೇ ಎಲ್ಲರೂ ಜೀವನ ನಡೆಸುತ್ತಿದ್ದಾರೆ. ಅಂಬೇಡ್ಕರ್ ಏಕ ಸಮುದಾಯಕ್ಕೆ ಸೀಮಿತವಾಗಿಲ್ಲ. ಎಲ್ಲ ಸಮುದಾಯಕ್ಕೂ ಬೇಕಾಗಿದ್ದಾರೆ’ ಎಂದರು.

ವಿಶೇಷ ಉಪನ್ಯಾಸ ನೀಡಿದ ಪ್ರೊ.ಸಿದ್ದಣ್ಣ ಪರಮೇಶ್ವರ ಕಂಪ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ಮಾತನಾಡಿದರು.

ಇದಕ್ಕೂ ಮುನ್ನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಅವರ ಪ್ರತಿಮೆಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ದಲಿತಪರ ಸಂಘಟನೆಗಳ ಮುಖಂಡರು ಪುಷ್ಪನಮನ ಸಲ್ಲಿಸಿದರು. ನಂತರ ಅವರ ಭಾವಚಿತ್ರವನ್ನು ಅಂಬೇಡ್ಕರ್ ವೃತ್ತದಿಂದ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ಮೆರವಣಿಗೆ ಮಾಡಲಾಯಿತು.

ಅಂಬೇಡ್ಕರ್ ಜಯಂತಿ ನಿಮಿತ್ತ ಸಾಮೂಹಿಕ ವಿವಾಹಗಳು ಜರುಗಿದವು. ಗ್ರೇಡ್ -2 ತಹಶೀಲ್ದಾರ್ ಮಹಾಂತಗೌಡ, ಪೌರಾಯುಕ್ತ ವಿರೂಪಾಕ್ಷಮೂರ್ತಿ, ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹುಲಗಪ್ಪ, ತಾ.ಪಂ ಇಒ ರಾಮರೆಡ್ಡಿ ಪಾಟೀಲ, ದಲಿತ ಸಂಘಟನೆ ಮುಖಂಡ ಹುಸೇನಪ್ಪ ಹಂಚಿನಾಳ, ಕೆ. ಅಂಬಣ್ಣ, ಹುಲಗಪ್ಪ ಮಾಗಿ, ಹಂಪೇಶ ಹರಿಗೋಲ, ಸೋಮನಾಥ ಬಂಡಾರಿ ಸೇರಿ ದಲಿತ ಸಮಾಜದ ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-35-1634791306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.