ಗಂಗಾವತಿ: ‘ಬಾಬು ಜಗಜೀವನರಾಂ ಅವರು ಜನರ ಒಳಿತಿಗಾಗಿ ಕ್ರಾಂತಿಕಾರಿ ನಿಲುವುಗಳ ಜತೆ ದೇಶದ ಅಭಿವೃದ್ಧಿಗಾಗಿ ಹಲವು ನಿರ್ಧಾರ ಕೈಗೊಂಡು ಅನುಷ್ಠಾನಕ್ಕೆ ತಂದ ಅಪ್ರತಿಮ ನಾಯಕ’ ಎಂದು ಅಧ್ಯಾಪಕ ಚಂದ್ರಶೇಖರ ಅಭಿಪ್ರಾಯಪಟ್ಟರು.

ನಗರದ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಭಾನುವಾರ ನಡೆದ ಭಾರತದ ಮಾಜಿ ಪ್ರಧಾನಿ ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರಸಭೆ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ, ‘ಬಾಬು ಜಗಜೀವನರಾಂ ಅವರು ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಬದಲಾವಣೆ ತಂದಿದ್ದಾರೆ’ ಎಂದರು.

ಗಂಗಾವತಿ ನಗರ ಪೊಲೀಸ್ ಠಾಣೆಯ ಪಿ.ಐ ಪ್ರಕಾಶ ಮಾಳೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೇಡ್-1 ಹುಲಗಪ್ಪ ಮಾತನಾಡಿದರು.

ಇದಕ್ಕೂ ಮುನ್ನ ಡಾ.ಬಾಬು ಜಗಜೀವನರಾಂ ವೃತ್ತದಲ್ಲಿ ಅವರ ಭಾವಚಿತ್ರ ಕ್ಕೆ ವಿಶೇಷ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು. ಬಳಿಕ ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.

ಗ್ರೇಡ್-2 ತಹಶೀಲ್ದಾರ್ ಮಹಾಂತೇಶಗೌಡ, ತಾ.ಪಂ ಇಒ ರಾಮರೆಡ್ಡಿ ಪಾಟೀಲ, ಸಮುದಾಯದ ಮುಖಂಡರಾದ ಹಂಪೇಶ ಹರಿಗೋಲು, ಸಿದ್ದಾಪುರ ಗಂಗಣ್ಣ, ಶಂಕರ ಸಿದ್ಧಾಪುರ ಸೇರಿ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಸಕರ ಗೈರು, ಮುಖಂಡರ ಆಕ್ರೋಶ: ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಜಿ.ಜನಾರ್ದನರೆಡ್ಡಿ ಗೈರು ಖಂಡನೀಯ ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ವೇದಿಕೆ ಕಾರ್ಯಕ್ರಮದಲ್ಲಿನ ಅಧಿಕಾರಿಗಳ ಬಳಿ ವಾಗ್ವಾದ ನಡೆಸಿದರು.

ಪೌರಾಯುಕ್ತರು, ತಾ.ಪಂ ಇಒ, ಗ್ರೇಡ್-2 ತಹಶೀಲ್ದಾರ್ ಪ್ರತಿಕ್ರಿಯಿಸಿ, ‘ಶಾಸಕರು ಕೆಲ ಅನಿವಾರ್ಯ ಕಾರಣಗಳಿಂದ ಬರಲು ಆಗುವುದಿಲ್ಲ. ಮುಂದಿನ ಎಲ್ಲ ಕಾರ್ಯಕ್ರಮಗಳಿಗೆ ಹಾಜರಿರುತ್ತೇನೆ ಎಂದು ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-35-1247141580

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.