ಗಂಗಾವತಿ: ‘ಸೌಹಾರ್ದ ಸಹಕಾರದ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದರೆ, ಅಲ್ಲಿನ ಆಡಳಿತ ಮಂಡಳಿ, ಸಿಬ್ಬಂದಿ ಉತ್ತಮ ಕಾರ್ಯನಿರ್ವಹಣೆ ಅಗತ್ಯ’ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಜಿ.ಶ್ರೀಧರ ಕೆಸರಹಟ್ಟಿ ಹೇಳಿದರು.

ನಗರದಲ್ಲಿ ಶನಿವಾರ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತ ಕಲಬುರಗಿ ಪ್ರಾಂತೀಯ ಕಚೇರಿ ವತಿಯಿಂದ ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕಿನ ಸೌಹಾರ್ದ ಸಹಕಾರ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರಿಗೆ ಆಯೋಜಿಸಿದ್ದ ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸೌಹಾರ್ದ ಸಹಕಾರ ಬ್ಯಾಂಕ್ ಕೇವಲ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗದೇ, ಸಮಾಜಿಕ ಸೇವಾ ಚಟುವಟಿಕೆಗಳಲ್ಲಿಯೂ ಸಹ ಭಾಗವಹಿಸಬೇಕು. ಎಲ್ಲರೂ ತರಬೇತಿಯ ಸದುಪಯೋಗ ಪಡೆಯಬೇಕು’ ಎಂದರು.

ಸಹಕಾರಿಗಳ ಒಕ್ಕೂಟದ ಉಪಾಧ್ಯಕ್ಷ ಮಹಾಲಿಂಗಪ್ಪ, ನಿರ್ದೇಶಕ ಕುಮಾರೆಪ್ಪ ಸಿಂಗನಾಳ, ನಾಗಲಿಂಗಪ್ಪ ಪತ್ತಾರ, ಲೋಕೆಶಪ್ಪ, ಶರಣಬಸವ, ಸಂಪನ್ಮೂಲ ವ್ಯಕ್ತಿ ರಘುನಂದ, ಸುನೀಲ ಪತ್ತಾರ, ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಓಂಕಾರ್ ಧರಣಿ ಸೇರಿದಂತೆ 150ಕ್ಕೂ ಹೆಚ್ಚು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-35-423574469

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.