ಗಂಗಾವತಿ: ‘ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು’ ಎಂದು ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ ಬಾಬು ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿಯ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಅನ್ನಭಾಗ್ಯ ಯೋಜನೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ಪ್ರತಿ ತಿಂಗಳು ಪಡಿತರ ವಿತರಣೆಯಾಗಬೇಕು. ತಿಂಗಳ ಕೊನೆ ದಿನದವರೆಗೆ ನ್ಯಾಯಬೆಲೆ ಅಂಗಡಿಯವರು ಪಡಿತರ ವಿತರಣೆ ಮಾಡಬೇಕು’ ಎಂದು ಆಹಾರ ನಿರೀಕ್ಷಕರಿಗೆ ಸೂಚನೆ ನೀಡಿದರು.

‘ಶಾಲಾ -ಕಾಲೇಜು ಮಕ್ಕಳಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಬೇಕು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಯಿಂದ ಯಾವುದೇ ಫಲಾನುಭವಿಗಳು ವಂಚಿತರಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಮರಣ ಹೊಂದಿದ ಫಲಾನುಭವಿಗಳನ್ನು ಯೋಜನೆಯಿಂದ ತೆಗೆದುಹಾಕಬೇಕು’ ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಇಒ ರಾಮರೆಡ್ಡಿ ಪಾಟೀಲ್ ಮಾತನಾಡಿ, ‘ಅನುಷ್ಠಾನ ಇಲಾಖೆ ಅಧಿಕಾರಿಗಳು ಶೇ 100ರಷ್ಟು ಪ್ರಗತಿ ಸಾಧಿಸಬೇಕು. ಯೋಜನೆಯಿಂದ ಹೊರಗಿರುವ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆ ಅಧಿಕಾರಿಗಳು ಸಭೆಗೆ ಪ್ರಗತಿ ವರದಿ ಒಪ್ಪಿಸಿದರು.

ಸಿಡಿಪಿಒ ಜಯಶ್ರೀ, ಕೆಇಬಿ ಎಇಇ ಮಂಜುನಾಥ, ಕೆಎಸ್ಆರ್ಟಿಸಿ ತಾಲ್ಲೂಕು ವ್ಯವಸ್ಥಾಪಕ ರಾಜಶೇಖರ, ಉದ್ಯೋಗ ಇಲಾಖೆ ಅಧಿಕಾರಿ ಹನುಮೇಶ, ಆಹಾರ ನಿರೀಕ್ಷಕ ನಾಗರತ್ನ, ವಿಷಯ ನಿರ್ವಾಹಕ ರವೀಂದ್ರ ಕುಲಕರ್ಣಿ, ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾದ ಓಂಕಾರಪ್ಪ, ಪ್ರಜ್ವಲ್, ಮುಸ್ತಾಕ್, ಮಂಜುನಾಥ ಕಲಾಲ್, ಹಮೀದ್ ಮುಲ್ಲಾ, ಅಹ್ಮದ್ ಪಟೇಲ್, ಬಿ.ರಾಜಪ್ಪ ಸೇರಿ ಅನೇಕರು ಪಾಲ್ಗೊಂಡಿದ್ದರು.