ಬುಧವಾರ, ಜೂನ್ 29, 2022
26 °C

ಗಂಗಾವತಿ: ಬೋನಿಗೆ ಬಿದ್ದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ : ತಾಲ್ಲೂಕಿನ ಆನೆಗೊಂದಿಯ ಶ್ರೀ ಆದಿಶಕ್ತಿ ದುರ್ಗಾದೇವಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಸೆರೆಯಾಗಿದೆ.

ಕಳೆದ ಎರಡು ತಿಂಗಳಿಂದ ಆನೆಗೊಂದಿ ವ್ಯಾಪ್ತಿಯಲ್ಲಿ ಮನುಷ್ಯರ ಹಾಗೂ ಜಾನುವಾರುಗಳ ಮೇಲೆ ದಾಳಿ ನಡೆಸುವ ಮೂಲಕ ಚಿರತೆಯು ಭಯವನ್ನು ಮೂಡಿಸಿತ್ತು. ಇದರಿಂದ ಅಂಜನಾದ್ರಿ ಹಾಗೂ ಆದಿಶಕ್ತಿ ದುರ್ಗಾದೇವಿ ದೇಗುಲದ ದರ್ಶನವನ್ನು ಬಂದ್ ಮಾಡಲಾಗಿತ್ತು. 

ಜೊತೆಗೆ ಕಳೆದ ತಿಂಗಳು ದುರ್ಗಾದೇವಿ ದೇಗುಲದ ಅಡುಗೆ ಸಿಬ್ಬಂದಿಯೊಬ್ಬರನ್ನು ಚಿರತೆಯು ಕೊಂದು ಹಾಕಿತ್ತು. ಅದೇ ಸ್ಥಳದಲ್ಲಿ ಅರಣ್ಯ ಇಲಾಖೆಯ ಇಟ್ಟಿದ್ದ ಬೋನಿಗೆ ಇದೀಗ ಚಿರತೆಯು ಸೆರೆಯಾಗಿದೆ. ಇನ್ನೂ ನಾಲ್ಕೈದು ಚಿರತೆಗಳು ಇದ್ದು, ತಾಲ್ಲೂಕಿನಲ್ಲಿ ಒಟ್ಟು ಏಳು ಬೋನ್ ಗಳನ್ನು ಅಳವಡಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಜ್ ಮೇಟಿ ಪ್ರಜಾವಾಣಿಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು