ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆಗೆ ಹೊರಗುತ್ತಿಗೆ ಆಧಾರದಡಿ ಕೆಲಸ ಮಾಡುವ ಕಾರ್ಮಿಕರಿಗೆ ಬಾಕಿ ವೇತನ, ನಿರಂತರ ಕೆಲಸ, ಉದ್ಯೋಗ ಭದ್ರತೆ ಒದಗಿಸುವ ಜೊತೆಗೆ ಕಾರ್ಮಿಕ ಕಾಯ್ದೆ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಕೆ.ನಾಗಲಿಂಗಸ್ವಾಮಿ ಒತ್ತಾಯಿಸಿದರು.

ತಾಲ್ಲೂಕಿನ ವಡ್ಡರಹಟ್ಟಿಯಲ್ಲಿನ ನೀರಾವರಿ ಇಲಾಖೆ ಮುಖ್ಯ ಎಂಜಿನಿ ಯರ್ ಕಚೇರಿ ಎದುರು ಸೋಮವಾರ ಎಐಸಿಸಿಟಿಯು, ವಡ್ಡರಹಟ್ಟಿ ಹಾಗೂ ಕಾರಟಗಿ ಉಪ ವಿಭಾಗದ ಕಾರ್ಮಿಕರಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ತುಂಗಭದ್ರಾ ಎಡದಂಡೆ ಕಾಲುವೆಗೆ ಹೊರಗುತ್ತಿಗೆ ಆಧಾರದಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಜನವರಿ, ಫೆಬ್ರುವರಿ, ಮಾರ್ಚ್, ಏಪ್ರಿಲ್ ತಿಂಗಳವರೆಗೆ ವೇತನವೇ ಪಾವತಿಸಿಲ್ಲ. ಇದರಿಂದ ಕಾರ್ಮಿಕರ ಜೀವನ ತುಂಬ ಕ್ಲಿಷ್ಟಕರವಾಗಿದೆ. ಇನ್ನು ಸಂಧಾನ ಸಭೆ, ಕಾರ್ಮಿಕ ಇಲಾಖೆ ಮುಂದಾಳತ್ವದಲ್ಲಿ ತೆಗೆದುಕೊಂಡ ನಿರ್ಧಾರಗಳಿಗೂ ನೀರಾವರಿ ಇಲಾಖೆ ಸ್ಪಂದಿಸುತ್ತಿಲ್ಲ’ ಎಂದು ಹೇಳಿದರು.

‘ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕಲ್ಪಿಸುತ್ತಿಲ್ಲ. ಕನಿಷ್ಠ ವೇತನ ಸಿಗುತ್ತಿಲ್ಲ. ಇಎಸ್ಐ, ಪಿಎಫ್ ಸೇರಿ ಕಾನೂನುಬದ್ಧ ಸೌಲಭ್ಯಗಳು ದೊರಕುತ್ತಿಲ್ಲ. ಸರ್ಕಾರ ತನ್ನ ಅಧೀನದಲ್ಲಿ ಬರುವ ಸಂಸ್ಥೆಗಳ ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘಿಸುತ್ತಿರುವುದು ಖಂಡನೀಯ. ಹಾಗೇ ಟೆಂಡರ್ ಪ್ರಕ್ರಿಯೆ ವಿಳಂಬದ ಹೆಸರಿನಲ್ಲಿ ಕಾರ್ಮಿಕರನ್ನು ಕೆಲಸದಿಂದ ವಂಚಿತರನ್ನಾಗಿ ಮಾಡುತ್ತಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ’ ಎಂದರು.

ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ ದೊರೆರಾಜು ಮಾತನಾಡಿ, ‘ಸರ್ಕಾರ ಕಾರ್ಮಿಕ ನ್ಯಾಯಾಲಯ, ಕಾರ್ಮಿಕ ಇಲಾಖೆಯ ನಿರ್ದೇಶನಗಳನ್ನು ತಕ್ಷಣವೇ ಜಾರಿಗೊಳಿಸಿ ಕಾರ್ಮಿಕರ ಬಾಕಿ ವೇತನ ಪಾವತಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳು ಲಿಖಿತವಾಗಿ ಸ್ಪಷ್ಟ ಉತ್ತರ ನೀಡಬೇಕು. ಕೂಡಲೇ ಕಾರ್ಮಿಕರ ವೇತನ ವ್ಯತ್ಯಾಸದ ಮೊತ್ತವನ್ನು ಖಾತೆಗೆ ಜಮಾ ಮಾಡಬೇಕು’ ಎಂದು ಒತ್ತಾಯಿಸಿ ವಡ್ಡರಹಟ್ಟಿ ಕಾರ್ಯಪಾಲಕ ಎಂಜಿನಿಯರ್ ಎಂ.ಎಸ್ ಗೋಡೆಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಡ್ಡರಹಟ್ಟಿ ಉಪ ವಿಭಾಗದ ಕಾರ್ಮಿಕರ ಸಂಘದ ತಾಲ್ಲೂಕು ಅಧ್ಯಕ್ಷ ಶರಣಬಸವ ಹೇರೂರು, ಕಾರಟಗಿ ಉಪ ವಿಭಾಗದ ತಾಲ್ಲೂಕು ಅಧ್ಯಕ್ಷ ಹುಚ್ಚಯ್ಯಸ್ವಾಮಿ, ಲಕ್ಷ್ಮಣ ಸಿಂಗನಾಳ, ಚಾಂದ್ ಪಾಷಾ, ಶಿವುಕುಮಾರ ತಿಪ್ಪನಾಳ, ಸೈಯದ್ ಸಾಬ್, ಗುಂಡಪ್ಪ, ವೀರಯ್ಯ ಸ್ವಾಮಿ, ಶೇಖರ್ ಕಾರಟಗಿ, ಹನುಮಂತಪ್ಪ ಹೂಗಾರ್, ಯಮನಪ್ಪ ಕುಂಟೋಜಿ, ಶರಣಪ್ಪ ಹಣಬಳ ಕ್ಯಾಂಪ್, ಖಜಸಾಬ್, ಲಕ್ಷ್ಮೀ, ಲಕ್ಷ್ಮಮ್ಮ, ನಾಗಮ್ಮ, ಮೆಹಬೂಬಸಾಬ, ನಬಿಸಾಬ, ವೆಂಕಟೇಶ ಮತ್ತಿತರ ಕಾರ್ಮಿಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-35-2105879722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.