ಗಂಗಾವತಿ: ಇಲ್ಲಿನ ಶ್ರೀ ಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ‘ಹದಿಹರೆಯದವರ ಆರೋಗ್ಯ ಸಮಸ್ಯೆ ಮತ್ತು ಪರಿಹಾರ’ ಕುರಿತ ಆರೋಗ್ಯ ಜಾಗೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವೀರೇಶ ಬಲಕುಂದಿ ಮಾತನಾಡಿ, ‘ಹದಿಹರೆಯದ ವಯಸ್ಸಿನಲ್ಲಿ ಆರೋಗ್ಯ ಕಾಳಜಿ ತುಂಬ ಮುಖ್ಯ. ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಆರೋಗ್ಯದ ಬಗ್ಗೆ ಸಹ ಕಾಳಜಿ ಹೊಂದಬೇಕು. ದೇಶದ ಭವಿಷ್ಯ ತರುಣ- ತರುಣಿಯರ ಮೇಲೆ ನಿಂತಿದೆ. ಸದೃಢ ಸಮಾಜ, ರಾಷ್ಟ್ರ ನಿರ್ಮಾಣಕ್ಕೆ ಯುವಕ-ಯುವತಿಯರಿಂದ ಮಾತ್ರ ಸಾಧ್ಯ ಎನ್ನುವುದು ವಿದ್ಯಾರ್ಥಿಗಳು ಮನವರಿಕೆ ಮಾಡಿಕೊಳ್ಳಬೇಕು’ ಎಂದರು.

ಬೆಂಗಳೂರು ಸೇಂಟ್ ಜಾನ್ಸ್ ಆಸ್ಪತ್ರೆ ತಜ್ಞ ವೈದ್ಯ ಡಾ.ಸುರೇಶ ಬಿರಾದಾರ, ಹಾಸನದ ವೈದ್ಯೆ ಡಾ.ಶಿಫಾಲಿ ವಿಶೇಷ ಉಪನ್ಯಾಸ ನೀಡಿ, ಆರೋಗ್ಯ, ಶುಚಿತ್ವದ ಮಹತ್ವದ ಜೊತೆಗೆ ಜೀವನದಲ್ಲಿ ಯೋಗ, ನಡಿಗೆ, ಒಳ್ಳೆಯ ಆಹಾರ ಕ್ರಮ, ಸೇವಿಸುವ ಆಹಾರದಲ್ಲಿನ ಪೌಷ್ಠಿಕತೆ , ದೇಹಾರೋಗ್ಯ ಕಾಪಾಡಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪ್ರಾಚಾರ್ಯ ಶಿವರಾಜ ಗುರಿಕಾರ ಮಾತನಾಡಿದರು. ನಂತರ ನೂರಾರು ವಿದ್ಯಾರ್ಥಿಗಳು ವೈದ್ಯರೊಂದಿಗೆ ಆರೋಗ್ಯ ಸಮಸ್ಯೆಗಳ ಬಗ್ಗೆ ಸಲಹೆ, ಚಿಕಿತ್ಸೆಯ ಜೊತೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಈ ವೇಳೆ ಆಂತರಿಕ ಗುಣಮಟ್ಟ ಕೋಶದ ಸಂಯೋಜಕ ಮಂಜುನಾಥ ಕೆ.ಎಚ್, ಸಖಿ ಮಹಿಳಾ ಘಟಕದ ಸಂಯೋಜಕಿ ಮೆಹ್ತಾಬ್ ಅಂಜುಮ್, ಅತಿಥಿ ಉಪನ್ಯಾಸಕ ಸಂಘದ ಅಧ್ಯಕ್ಷ ಪವನ ಗುಂಡೂರ, ರೆಡ್ಕ್ರಾಸ್ ಘಟಕದ ಸಂಯೋಜಕ ಅಕ್ಕಿ ಮಾರುತಿ, ಉಪನ್ಯಾಸಕ ಡಾ.ಬಸವರಾಜ ಎಸ್. ಗಡಾದ, ಭೀಮಪ್ಪ ಸೇರಿ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-35-1703667239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.