ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಷ್ಟಗಿ: ನ್ಯಾಯಾಲಯ ಸಂಕೀರ್ಣದ ಮುಂದೆ ಶೌಚ ತ್ಯಾಜ್ಯ

ದುರ್ನಾತಕ್ಕೆ ಬೇಸತ್ತ ವಕೀಲರು, ಕಕ್ಷಿದಾರರು, ಸಿಬ್ಬಂದಿ
Published : 22 ಜೂನ್ 2024, 13:59 IST
Last Updated : 22 ಜೂನ್ 2024, 13:59 IST
ಫಾಲೋ ಮಾಡಿ
Comments
ವಿಜಯಮಹಾಂತೇಶ ಕುಷ್ಟಗಿ ವಕೀಲರ ಸಂಘದ ಅಧ್ಯಕ್ಷ
ವಿಜಯಮಹಾಂತೇಶ ಕುಷ್ಟಗಿ ವಕೀಲರ ಸಂಘದ ಅಧ್ಯಕ್ಷ
ಶೌಚಾಲಯ ತ್ಯಾಜ್ಯದಲ್ಲಿಯೇ ನಿತ್ಯ ಕಾರ್ಯನಿರ್ವಹಿಸುತ್ತಿದ್ದೇವೆ ನ್ಯಾಯಾಲಯದ ಸ್ಥಿತಿಯೇ ಹೀಗಾದರೆ ಬೇರೆಯವರ ಪಾಡೇನು. ಯಾರ ಬಳಿ ನ್ಯಾಯಕ್ಕೆ ಅಂಗಲಾಚಬೇಕು ಎಂಬುದೇ ತಿಳಿಯುತ್ತಿಲ್ಲ
-ವಿಜಯಮಹಾಂತೇಶ ಕುಷ್ಟಗಿ ವಕೀಲರ ಸಂಘದ ಅಧ್ಯಕ್ಷ
ದುರಸ್ತಿಗೆ ಹಣವಿಲ್ಲ ಕೈಚೆಲ್ಲಿದ ಪಿಡಬ್ಲೂಡಿ
ನ್ಯಾಯಾಲಯದ ಮುಂದೆ ಕೊಳಚೆ ನೀರು ಸಂಗ್ರಹವಾಗುತ್ತಿರುವುದು ಮತ್ತು ನ್ಯಾಯಾಧೀಶರ ವಾಹನ ನಿಲುಗಡೆ ಸ್ಥಳದಲ್ಲಿ ಮಳೆನೀರು ನಿಲ್ಲುತ್ತಿದ್ದು ದುರಸ್ತಿಗೆ ತುರ್ತುಕ್ರಮ ಕೈಗೊಳ್ಳಲು ನ್ಯಾಯಾಲಯದಿಂದ ಜೂನ್ 13 ರಂದು ಲೋಕೋಪಯೋಗಿ ಇಲಾಖೆಗೆ ಎರಡು ಪ್ರತ್ಯೇಕ ಪತ್ರಗಳನ್ನು ಬರೆಯಲಾಗಿತ್ತು. ಆದರೆ ದುರಸ್ತಿಗೆ ಅನುದಾನ ಲಭ್ಯವಿಲ್ಲ ಎಂದು ಜೂನ್‌ 20ರಂದು ನ್ಯಾಯಾಲಯಕ್ಕೆ ಬರೆದ ಪತ್ರದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ‘ಪ್ರಜಾವಾಣಿ’ಗೆ ವಿವರಿಸಿದ ಎಇಇ ರಾಜಪ್ಪ ಈಗಾಗಲೇ ಎರಡು ಮೂರು ಬಾರಿ ಸ್ವಚ್ಛಗೊಳಿಸಿದ್ದರೂ ಪುನಃ ತ್ಯಾಜ್ಯ ಸಂಗ್ರಹವಾಗುತ್ತಿದೆ. ಅನುದಾನ ಬಿಡುಗಡೆಯಾದರೆ ಮಾತ್ರ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು. ಅಲ್ಲದೆ ನ್ಯಾಯಾಲಯದ ನಿರ್ವಹಣೆ ಜವಾಬ್ದಾರಿ ಲೋಕೋಪಯೋಗಿ ಇಲಾಖೆಯದ್ದಲ್ಲ ಸಣ್ಣಪುಟ್ಟ ದುರಸ್ತಿ ಕೆಲಸಗಳನ್ನು ನ್ಯಾಯಾಲಯದವರೇ ಮಾಡಿಸಿಕೊಳ್ಳಬಹುದಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT