ಕೊಪ್ಪಳ: ಪ್ರೀತಿ ವಿಚಾರಕ್ಕಾಗಿ ಇಲ್ಲಿನ ಬಹದ್ದೂರ್ ಬಂಡಿ ರಸ್ತೆಯಲ್ಲಿರುವ ನದಿಮುಲ್ಲಾ ಖಾದ್ರಿ ಮಸೀದಿ ಮುಂಭಾಗದಲ್ಲಿ ಆ. 3ರಂದು ನಡೆದಿದ್ದ ಗವಿಸಿದ್ಧಪ್ಪ ನಾಯಕ ಎನ್ನುವ ಯುವಕನ ಕೊಲೆ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಅಂಗಡಿಗಳನ್ನು ವರ್ತಕರೇ ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದಾರೆ.

‘ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ನನ್ನ ಮಗನ ಸಾವಿಗೆ ನ್ಯಾಯ ಪಡೆಯಲು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿ’ ಎಂದು ಕೊಲೆಗೀಡಾದ ಯುವಕನ ತಂದೆ ನಿಂಗಜ್ಜ ಅಂಗಡಿಗಳಿಗೆ ಹೋಗಿ ಕೈ ಮುಗಿದು ಬೇಡಿಕೊಂಡಿದ್ದರು. ಆದ್ದರಿಂದ ವರ್ತಕರು ಬೆಂಬಲ ನೀಡಿದ್ದಾರೆ. ಇನ್ನೂ ಕೆಲವರು ಅಂಗಡಿಗಳನ್ನು ತೆರೆಯಲು ಮುಂದಾಗಿದ್ದಾಗ ಹಿಂದೂ ಸಮಾಜದ ಯುವಕರು ಬೈಕ್ ರ್ಯಾಲಿ ಮಾಡಿ ಬಂದ್ ಮಾಡುವಂತೆ ಹೇಳಿದರು. ಮುಂಜಾಗ್ರತಾ ಕ್ರಮವಾಗಿ ಖಾಸಗಿ ಶಾಲಾ ಹಾಗೂ ಕಾಲೇಜುಗಳು ರಜೆ ಘೋಷಣೆ ಮಾಡಿವೆ. ಮಧ್ಯಾಹ್ನ 12 ಗಂಟೆಗೆ ಇಲ್ಲಿನ ಗಡಿಯಾರ ಕಂಬದಿಂದ ಅಶೋಕ ಸರ್ಕಲ್ ತನಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ನಿಂಗಜ್ಜ ‘ನನ್ನ ಮಗನ ಸಾವಿಗೆ ನ್ಯಾಯ ದೊರಕಿಸಿಕೊಡಲು ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ನೀಡುವಂತೆ ವರ್ತಕರು ಸೇರಿದಂತೆ ಎಲ್ಲರಿಗೂ ಮನವಿ ಮಾಡಿಕೊಂಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನ್ನ ಮಗನ ಕೊಲೆಗೆ ಕಾರಣರಾದ ಎಲ್ಲರನ್ನೂ ಬಂಧಿಸಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದೇನೆ. ಅನೇಕ ನಾಯಕರು ಮನೆಗೆ ಭೇಟಿ ನೀಡಿ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
.ಗವಿಸಿದ್ಧಪ್ಪ ಕೊಲೆ ಪ್ರಕರಣಕ್ಕೆ ಕೋಮುವಾದದ ಬಣ್ಣ ಬಳಿಯಬಾರದು: ಮುಖಂಡರು ಮನವಿ.ಗವಿಸಿದ್ಧಪ್ಪ ನಾಯಕನ ಕೊಲೆ ಆರೋಪಿಗೆ ಪಿಎಫ್ಐ ನಂಟು: ಶ್ರೀರಾಮುಲು ಆರೋಪ.ಕೊಪ್ಪಳ | ಗವಿಸಿದ್ಧಪ್ಪ ನಾಯಕ ಕೊಲೆ ಪ್ರಕರಣ: ನಾಲ್ಕು ಆರೋಪಿಗಳ ಬಂಧನ.ಗವಿಸಿದ್ದಪ್ಪ ಹತ್ಯೆ ಪ್ರಕರಣ | ಕಾಣದ ಕೈಗಳನ್ನು ಬಹಿರಂಗಪಡಿಸಿ: ಶ್ರೀರಾಮುಲು ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.