ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಪಾತ್ರೆ ತೊಳೆದು ಸರಳತೆ ಮೆರೆದ ಗವಿಮಠದ ಗವಿಸಿದ್ಧೇಶ್ವರ ಸ್ವಾಮೀಜಿ

Published 10 ಫೆಬ್ರುವರಿ 2024, 16:16 IST
Last Updated 10 ಫೆಬ್ರುವರಿ 2024, 16:16 IST
ಅಕ್ಷರ ಗಾತ್ರ

ಕೊಪ್ಪಳ: ಸದಾ ಸರಳತೆಯ ಮೂಲಕ ಜನಮಾನಸದಲ್ಲಿ ಸ್ಥಾನ ಗಳಿಸಿರುವ ಇಲ್ಲಿನ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಪಾತ್ರೆಗಳನ್ನು ತೊಳೆಯುವ ಮೂಲಕ ಸರಳತೆ ಮೆರೆದಿದ್ದಾರೆ.

ಗವಿಮಠದ ಜಾತ್ರಾ ಮಹೋತ್ಸವ ಅಂಗವಾಗಿ ಅವರಾತ್ರಿ ಅಮವಾಸ್ಯೆ ಶುಕ್ರವಾರ ಲಕ್ಷಾಂತರ ಭಕ್ತರು ಮಹಾದಾಸೋಹ ಸವಿದಿದ್ದರು. ಮಠದ ಭಕ್ತರು ಹಾಗೂ ಸ್ವಯಂಸೇವಕರು ಸ್ವಾಮೀಜಿ ಜೊತೆ ಕೈ ಜೋಡಿಸಿ ಪಾತ್ರೆ ತೊಳೆದಿದ್ದಾರೆ.

ಮಠದ ಆವರಣದಲ್ಲಿ ಕಸಗೂಡಿಸುವುದು, ಪಾತ್ರೆ ತೊಳೆಯುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿರುವುದು ಭಕ್ತರ ಮೆಚ್ಚುಗೆಗೆ ಕಾರಣವಾಗಿದೆ. ಪ್ರತಿ ಜಾತ್ರೆಯ ಸಮಯದಲ್ಲಿಯೂ ಸ್ವಾಮೀಜಿ ಈ ಕೆಲಸ ಮಾಡುತ್ತ ಬಂದಿದ್ದಾರೆ. ಸ್ವಾಮೀಜಿ ಕಾರ್ಯವನ್ನು ನೋಡಿದ ಅನೇಕರು ತಾವೂ ಸಹ ಜಾತ್ರೆಯ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT