ಸಂಭ್ರಮದ ಆಚರಣೆಗೆ ಸಿದ್ಧತೆ ಕೈಗೊಳ್ಳಿ

7
ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆ

ಸಂಭ್ರಮದ ಆಚರಣೆಗೆ ಸಿದ್ಧತೆ ಕೈಗೊಳ್ಳಿ

Published:
Updated:
Deccan Herald

ಕೊಪ್ಪಳ: ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆ ದಿನದಂದು ಬೆಳಿಗ್ಗೆ 8ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ  ಧ್ವಜಾರೋಹಣ, ಬೆಳಿಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ. ವಿದ್ಯಾರ್ಥಿಗಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ  ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಬೇಕು. ಮಕ್ಕಳನ್ನು ಕ್ರೀಡಾಂಗಣಕ್ಕೆ ಕರೆದುಕೊಂಡು ಹೋಗಲು   ಬಸ್‌ಸೌಲಭ್ಯ ಕಲ್ಪಿಸಬೇಕು ಎಂದು ಹೇಳಿದರು.

ಜಿಲ್ಲಾ ಕ್ರೀಡಾಂಗಣ ಮತ್ತು ಸಾಹಿತ್ಯ ಭವನದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಂಸ್ಕೃತಿಕ ಸಮಿತಿ ಆಯ್ಕೆ ಮಾಡಬೇಕು. ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು. ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಲಾಗಿದ್ದು, ನಗರ ಸೇರಿದಂತೆ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವುದಾಗಲಿ, ಬಳಸುವುದಾಗಲಿ ಮಾಡುವಂತಿಲ್ಲ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿ, ಸರ್ಕಾರದ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಈ ಬಾರಿ ಬೆಳಿಗ್ಗೆಯೇ ಆಯಾ ಶಾಲಾ ಮುಖ್ಯಸ್ಥರು ತಪ್ಪದೆ ಸಿಹಿ ತಿಂಡಿಯ ಜತೆಗೆ ಹಾಲು ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳಿಗೆ ನಗರಸಭೆ ವತಿಯಿಂದ ಬಾಳೆಹಣ್ಣು ವಿತರಿಸಬೇಕು. ಕಾರ್ಯಕ್ರಮದಲ್ಲಿ   ಸ್ವಾತಂತ್ರ್ಯ ಹೋರಾಟಗಾರರಿಗೆ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದವರಿಗೆ ಸನ್ಮಾನಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಸಿ.ಡಿ.ಗೀತಾ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ  ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಕವಾಯತು ಮಾಡಲು ಪೂರ್ವ ಸಿದ್ಧತೆ ಕೈಗೊಳ್ಳುವ ಮಕ್ಕಳಿಗೆ ಕುಡಿಯುವ ನೀರು ಹಾಗೂ ಅಲ್ಪಾಹಾರದ ವ್ಯವಸ್ಥೆ ಕೈಗೊಳ್ಳಬೇಕು. ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗೆ ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ ರಚಿಸಿದ್ದು, ಆಯಾ ಸಮಿತಿಗೆ ವಹಿಸಿದ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ಶಿವಾನಂದ ಹೊದ್ಲೂರ್, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ, ಕೆಆರ್‌ಐಡಿಎಲ್ ಕಾರ್ಯಪಾಲಕ ಎಂಜಿನಿಯರ್‌ ಕೊರಬು ಸಲಹೆ ನೀಡಿದರು.

ನಗರಾಭಿವೃದ್ಧಿ ಯೋಜನಾ ನಿರ್ದೇಶಕ ವಿಜಯಕುಮಾರ್, ನಗರಸಭೆ ಪೌರಾಯುಕ್ತ ಸುನೀಲ್ ಪಾಟೀಲ, ಡಿವೈಎಸ್‍ಪಿ ಸಂದಿಗವಾಡ, ಗಣ್ಯರಾದ ವಿಠ್ಠಪ್ಪ ಗೋರಂಟ್ಲಿ, ಮಹಾಂತೇಶ ಮಲ್ಲನಗೌಡರ, ಮಂಜುನಾಥ ಗೊಂಡಬಾಳ ಇದ್ದರು.

ಶಾಲಾ ಮುಖ್ಯಸ್ಥರು ತಪ್ಪದೇ ಸಿಹಿ ತಿಂಡಿಯ ಜತೆಗೆ ಹಾಲು ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳಿಗೆ ನಗರಸಭೆ ವತಿಯಿಂದ ಬಾಳೆಹಣ್ಣು ವಿತರಿಸಬೇಕು.
- ಎಂ.ಕನಗವಲ್ಲಿ, ಜಿಲ್ಲಾಧಿಕಾರಿ

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !