ಗುರುವಾರ , ಜುಲೈ 29, 2021
21 °C

ಕುಷ್ಟಗಿ: ‘ಸುರಕ್ಷತಾ ಪರಿಕರ ಒದಗಿಸಿ’, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಕಲಾವತಿ ಮೆಣೆದಾಳ, ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ,  ಸುರಕ್ಷಾ ಪರಿಕರಗಳು ಸೇರಿದಂತೆ  ಅನೇಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.

ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್‌, ಕೈಗವುಸುಗಳನ್ನು ಹಾಗೂ ಪಿಪಿಇ ಕಿಟ್‌ಗಳನ್ನು  ನೀಡಬೇಕು. ಕೋವಿಡ್‌ ಭಾಗವಾಗಿ ದುಡಿಯುತ್ತಿದ್ದು ಪ್ರೋತ್ಸಾಹಧನ ನೀಡಬೇಕು. ಕೊರೊನಾ ವಾರಿಯರ್ಸ್ ಆಗಿರುವುದರಿಂದ ₹50 ಲಕ್ಷ ವಿಮೆ ಸೌಲಭ್ಯ ಹಾಗೂ ಸೋಂಕಿತರಾಗಿದ್ದರೆ ₹5 ಲಕ್ಷ ಪರಿಹಾರ ನೀಡಬೇಕು. ಕಾರ್ಯಕರ್ತೆಯರ ಸೇವೆಯನ್ನು ಕಾಯಂಗೊಳಿಸುವುದು ಎಂದು ಶಾಸಕ ಅಮರೇಗೌಡ ಬಯ್ಯಾಪುರ ಮತ್ತು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಯ್ಯಾಪುರ, ಈ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಮಾತನಾಡಲಾಗುವುದು ಎಂದರು.

ಅಂಗನವಾಡಿ ನೌಕರರ ಸಂಘದ ಪ್ರಮುಖರಾ ಜಯಶ್ರಿ ಆಶ್ರಿತ, ಲಲಿತಾ ಚಳಗೇರಿ, ಉಮಾ ಅಂಗಡಿ, ರೇಣುಕಾ ಮನ್ನೇರಾಳ, ವಿದ್ಯಾಶ್ರಿ ಚಳಗೇರಿ, ಶಾರದಾ ಹೂಲಗೇರಿ, ಅನ್ನಪೂರ್ಣ ಗುಡಿ, ನಿಂಗಮ್ಮ, ನಾಗರತ್ನ  ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು