ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಾಲಕರ ಕಳೆದುಕೊಂಡವರಿಗೆ ವಿದ್ಯಾರ್ಥಿ ವೇತನ ನೀಡಿ’

Last Updated 10 ಆಗಸ್ಟ್ 2021, 12:42 IST
ಅಕ್ಷರ ಗಾತ್ರ

ಕೊಪ್ಪಳ: ‘ಕೊರೊನಾದಿಂದ ತಾಯಿ, ತಂದೆ ಮತ್ತು ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು’ ಎಂದು ಸ್ಟೂಡೆಂಟ್‌ ಇಸ್ಲಾಮಿಕ್‌ಸಂಘಟನೆಯ (ಎಸ್‌ಐಒ) ರಾಜ್ಯ ಕಾರ್ಯದರ್ಶಿ ನಾಸಿರ್ ಉಡುಪಿ ಒತ್ತಾಯಿಸಿದರು.

ರಾಜ್ಯದಲ್ಲಿ ಕೊರೊನಾದಿಂದ ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಲಾಕ್‌ಡೌನ್ ಕಾರಣದಿಂದಾಗಿ ಬಹುತೇಕರು ಉದ್ಯೋಗ, ಸಂಬಳ ಸಿಗದೇ ಸಾಲ ಮಾಡಿ ಸಂಸಾರ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ರಾಜ್ಯದಲ್ಲಿ ಈಗಾಗಲೇ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಪ್ರಸ್ತುತ ಬಹುತೇಕ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಆರ್ಥಿಕ ಸಂಕಷ್ಟದಿಂದಾಗಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುವ ಆತಂಕವಿದೆ ಎಂದರು.

ಶಿಕ್ಷಣ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದ್ದು, ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೋತ್ತರ ಪದವಿ ಶಿಕ್ಷಣದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಶುಲ್ಕದಲ್ಲಿ ಶೇ50 ರಷ್ಟು ಕಡಿತಗೊಳಿಸಬೇಕು ಹಾಗೂ ಶುಲ್ಕವನ್ನು ಮೂರು ಕಂತುಗಳಲ್ಲಿ ಭರಿಸಲು ಪೋಷಕರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಸೂಕ್ತ ತುರ್ತು ಕ್ರಮ ಕೈಗೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಮಾಡಿಕೊಡುವ ಕುರಿತು ಅಧಿಕೃತ ಆದೇಶ ಹೊರಡಿಸಬೇಕು ಎಂದುಹೇಳಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷಇಲಿಯಾಸ್ ನಾಲಬಂದ್, ಅಪ್ರೋಜ್ ಅಹ್ಮದ್, ಝಕೀರಿಯಾಖಾನ್‌ ಹಾಗೂ ಎಂ.ಡಿ.ಅಖಿಲ್ ಉಡೇವು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT