ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರಿಗೆ ತರಬೇತಿ ನೀಡಿ: ರಘುನಂದನ್ ಮೂರ್ತಿ

ಎಸ್‌ಬಿಐ ಆರ್‌ಸೆಟ್‌ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಜಿ.ಪಂ ಸಿಇಒ ಸೂಚನೆ
Last Updated 14 ನವೆಂಬರ್ 2020, 16:40 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿದ ನಿರುದ್ಯೋಗಿ ಅಭ್ಯರ್ಥಿಗಳ ಪಟ್ಟಿ ಪಡೆದು, ಅಭ್ಯರ್ಥಿಗಳನ್ನು ಸಂಪರ್ಕಿಸಿ ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತರಬೇತಿ ನೀಡಿ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸಭಾಂಗಣದಲ್ಲಿಶನಿವಾರ ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ತರಬೇತಿ ಸಂಸ್ಥೆಯಲ್ಲಿ ಮಹಿಳಾ ಕೌಶಲಾಧಾರಿತ ವೃತ್ತಿಗಳಿಗೆ ಮಾತ್ರವಲ್ಲದೆ, ಯುವಕರು ಹೆಚ್ಚಿನ ಆಸಕ್ತಿ ಉಳ್ಳ ಎಲೆಕ್ಟ್ರಿಕಲ್, ಟೆಕ್ಟೈಲ್ಸ್, ಜೇನು ಸಾಕಾಣಿಕೆ, ಕುರಿ ಸಾಕಾಣಿಕೆ, ತೋಟಗಾರಿಕೆ ಬೆಳೆಗಳ ಪದ್ಧತಿ, ಮೀನುಗಾರಿಕೆ, ಹೈನುಗಾರಿಕೆ, ಕಂಪ್ಯೂಟರ್ ತರಬೇತಿ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಿ. ಅರ್ಜಿ ಆಹ್ವಾನಿಸುವುದಷ್ಟೇ ಅಲ್ಲ, ಅಭ್ಯರ್ಥಿಗಳ ಮಾಹಿತಿ ದೊರಕುವ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಿ, ಆಸಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ತರಬೇತಿ ನೀಡಿ. ಸ್ವಯಂ ಉದ್ಯೋಗ ಕೈಗೊಳ್ಳಲು ಸಂಸ್ಥೆ ಹಾಗೂ ಲೀಡ್ ಬ್ಯಾಂಕ್ ನಿಂದ ಅಗತ್ಯ ಅನುಕೂಲ ಮಾಡಿಕೊಡಿ ಎಂದರು.

ಸಂಸ್ಥೆಗೆ ಬಿಡುಗಡೆಯಾದ ಅನುದಾನ, ಫಲಾನುಭವಿಗಳ ವಿವರವನ್ನು ಪಡೆದ ಅವರು, ಸೂಕ್ತ ಮಾಹಿತಿ ನೀಡದ ಸಮಿತಿ ಸದಸ್ಯರಿಗೆ ಸರಿಯಾಗಿ ಕಾರ್ಯನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಅನುಕೂಲ ಕಲ್ಪಿಸಿಕೊಡಿ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಆರ್‌ಸೆಟ್‌ಇ ಸಂಸ್ಥೆಯ ನಿರ್ದೇಶಕ ವಿ.ಎಸ್.ಪಲ್ಲಾಪುರ,ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಪಿ.ಕೃಷ್ಣಮೂರ್ತಿ, ಜಂಟಿ ಕೈಗಾರಿಕಾ ನಿರ್ದೇಶಕ ಪ್ರಶಾಂತ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಪ್ರಾಣೇಶ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರೇವಣಸಿದ್ದಪ್ಪ ಬೋಲಾ, ಎಸ್.ಬಿ.ಐಮುಖ್ಯ ಪ್ರಬಂಧಕ ಮಹಾಂತೇಶ, ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ವೀರೇಶ್, ಕೈಮಗ್ಗಾಧಿಕಾರಿ ಹೈದರ್‌ಖಾನ್, ಪಾಲಿಟೆಕ್ನಿಕ್ ಕಾಲೇಜಿನ ವೀರನಗೌಡ, ಸಂಜೀವಿನಿ ಡಿಪಿಎಂಅಂಬಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT