ಕೊಪ್ಪಳ: ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಭಾರತ ಪ್ರಗತಿಯ ಹಾದಿಯಲ್ಲಿ ವೇಗವಾಗಿ ಸಾಗುತ್ತಿದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿರುವ ಕಾರಣ ಕಾರ್ಯಕರ್ತರು ಮನೆಮನೆಗೆ ತೆರಳಿ ಬಿಜೆಪಿ ಮತ್ತು ಮೋದಿ ಸಾಧನೆಯನ್ನು ಜನರಿಗೆ ತಿಳಿಸಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಮೋದಿಯವರ ದಿಟ್ಟ ನಿರ್ಧಾರಗಳು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿವೆ. ವೇಗವಾಗಿ ಹೆದ್ದಾರಿಗಳ ನಿರ್ಮಾಣ, ಕಿಸಾನ್ ಸನ್ಮಾನ್ ಯೋಜನೆಯಡಿ ವಾರ್ಷಿಕ ₹6000 ನೇರವಾಗಿ ಫಲಾನುಭವಿ ಖಾತೆಗೆ ಜಮೆ ಮಾಡಲಾಗುತ್ತಿದೆ’ ಎಂದಿದ್ದು, ಇದನ್ನು ಜನರ ಮುಂದಿಡಬೇಕು ಎಂದು ತಿಳಿಸಿದ್ದಾರೆ. ಮೋದಿ ಪ್ರಧಾನಿಯಾಗಿ ಒಂಬತ್ತು ವರ್ಷಗಳಾದ ಹಿನ್ನೆಲೆಯಲ್ಲಿ ಸಂಸದರು ಈ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.