ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನ ಹನುಮ ದೇಗುಲಕ್ಕೆ ಅಂಜನಾದ್ರಿಯ ಶಿಲೆ, ಮೂರ್ತಿ ಒಯ್ದ ರಾಜ್ಯಪಾಲರು

Last Updated 10 ಜನವರಿ 2021, 8:37 IST
ಅಕ್ಷರ ಗಾತ್ರ

ಕೊಪ್ಪಳ: ಗುಜರಾತ್‌ನ ಆನಂದ್ ಜಿಲ್ಲೆಯ ರಾಜ್ಯಪಾಲರ ಸ್ವಗ್ರಾಮ ಲಂಬಾವೇಲಾದಲ್ಲಿ ನಿರ್ಮಾಣ ಆಗುತ್ತಿರುವ ಆಂಜನೇಯನ ದೇಗುಲಕ್ಕೆ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶಿಲೆ ಹಾಗೂ ಹನುಮ ಮೂರ್ತಿಯನ್ನು ರಾಜ್ಯಪಾಲ ವಜೂಭಾಯಿ ರೂಢಬಾಯಿ ವಾಲಾ ತೆಗೆದುಕೊಂಡು ತೆರಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ರಾಮಭಕ್ತರು ಎಷ್ಟಿದ್ದಾರೊ, ಅಷ್ಟೇ ಹನುಮಭಕ್ತರೂ ಇದ್ದಾರೆ. ಅಂತೆಯೇ ಹನುಮನಿಗೆ ನಿತ್ಯಪೂಜೆ, ಭಕ್ತಕೋಟಿ ನಡೆದುಕೊಳ್ಳುತ್ತಾರೆ. ನಮ್ಮ ಸ್ವಗ್ರಾಮದಲ್ಲಿ ನಿರ್ಮಾಣ ಆಗುತ್ತಿರುವ ಆಂಜನೇಯನ ದೇವಸ್ಥಾನಕ್ಕೆ ಹನುಮ ಜನಿಸಿದ ಸ್ಥಳ ಅಂಜನಾದ್ರಿಯ ಶಿಲೆ, ಮೂರ್ತಿಯನ್ನು ಒಯ್ಯಲಾಗುತ್ತಿದೆ ಎಂದರು.

ನಿನ್ನ ಕೆಲಸವನ್ನು ನಿಷ್ಕಲ್ಮಶವಾಗಿ ಮಾಡು, ಪ್ರತಿಫಲವನ್ನು ಭಗವಂತನಿಗೆ ಬಿಡು ಎನ್ನುವುದಕ್ಕೆ ಮಾರುತಿ ಸಾಕ್ಷಿ. ಇಲ್ಲಿನ ಅಂಜನಾದ್ರಿ ಪೂಜಾ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಲಾರೆ. ಇಲ್ಲಿನ ಆಡಳಿತ ಅದನ್ನು ಬಗೆ ಹರಿಸುತ್ತದೆ ಎಂದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಎಸ್ಪಿ ಡಿ. ಶ್ರೀಧರ್, ಸಂಸದ ಸಂಗಣ್ಣ ಕರಡಿ, ಶಾಸಕ ಪರಣ್ಣ ಮುನವಳ್ಳಿ, ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT