ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಾಲಾ ಹಂತದಲ್ಲೇ ಕ್ರೀಡಾಸಕ್ತಿ ಬೆಳೆಸಿ’

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ
Last Updated 13 ಏಪ್ರಿಲ್ 2022, 4:36 IST
ಅಕ್ಷರ ಗಾತ್ರ

ಕೊಪ್ಪಳ :ಶಾಲಾ ಹಂತದಲ್ಲಿ ಯೇಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ಭಾಗವಹಿಸುವಂತೆ ಮನವೊಲಿಸುವುದು ಪಾಲಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜೀವನದಲ್ಲಿ ಒಂದು ಭಾಗವಾಗಿರಬೇಕು. ಇದರಿಂದ ನಮಗೆ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಿಗುತ್ತದೆ. ಪ್ರತಿಯೊಬ್ಬ ನೌಕರರು ಈ ರೀತಿಯ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವುದರ ಮೂಲಕ ಮನೆಯಲ್ಲಿರುವ ತಮ್ಮ ಮಕ್ಕಳಿಗೆ ಮಾರ್ಗದರ್ಶಕರಾಗಬೇಕು ಎಂದರು.

ನಗರಸಭೆ ಅಧ್ಯಕ್ಷೆ ಲತಾ ಗವಿಸಿದ್ದಪ್ಪ ಚಿನ್ನೂರ ಮಾತನಾಡಿ, ಇಂದಿನ ದಿನಗಳಲ್ಲಿ ನಾವು ಕ್ರೀಡೆಗಳಿಂದ ದೂರವಾಗುತ್ತಿದ್ದೇವೆ. ಸರ್ಕಾರಿ ನೌಕರರು ಕುಟುಂಬದ ನಿರ್ವಹಣೆಯ ಜೊತೆಗೆ ಇಂತಹ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯ ಉತ್ತಮವಾಗುತ್ತದೆ. ನಮ್ಮ ಮಕ್ಕಳು ಸಮೂಹ ಮಾಧ್ಯಮಗಳ ಮೋಜಿಗೆ ಒಳಗಾಗಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳನ್ನು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕುಎಂದರು.

ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಅಧ್ಯಕ್ಷ ನಾಗರಾಜ ಆರ್.ಜುಮ್ಮನ್ನವರ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಗೆ ಎಲ್ಲ ತಯಾರಿ ಮಾಡಿದ್ದೇವೆ. ಕ್ರೀಡಾಪಟುಗಳ ಅನುಕೂಲಕ್ಕಾಗಿ ನಾಲ್ಕು ಕಡೆ ನೀರಿನ ವ್ಯವಸ್ಥೆ, ಮೈದಾನದಲ್ಲಿ ಪೆಂಡಾಲ್, ಊಟದ ವ್ಯವಸ್ಥೆ ಮತ್ತು ಎಲ್ಲ ಮೂಲ ಸೌಕರ್ಯಗಳನ್ನು ಕಲ್ಪಿಸಿದ್ದೇವೆ ಎಂದರು.

ಜಿಲ್ಲೆಯ ನೌಕರ ಕ್ರೀಡಾಪಟುಗಳಾದ ವಿಷ್ಣು ನಾಯಕ್ ರಾಥೋಡ್ ಮತ್ತು ಕೃಷ್ಣ ರಾಥೋಡ್ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದಿದ್ದು, ಅವರನ್ನು ಸನ್ಮಾನಿ ಸುವ ಮೂಲಕ ನೌಕರರಲ್ಲಿ ಉತ್ಸಾಹ ತುಂಬಿದ್ದೇವೆ. ದೇಶದ ಪ್ರಗತಿಯಲ್ಲಿ ರಾಜ್ಯ 6ನೇ ಸ್ಥಾನದಲ್ಲಿದೆ ಎಂದರು.

ಜಿಪಂ ಸಿಇಒಬಿ.ಫೌಜಿಯಾ ತರನ್ನುಮ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಸರ್ಕಾರಿ ನೌಕರರ ಕ್ರೀಡಾಕೂಟ ಸಂಘಟನಾ ಸಮಿತಿ ಸದಸ್ಯ ಕಾರ್ಯದರ್ಶಿ ಅಮೃತ ಅಷ್ಟಗಿ, ಡಾ.ಅಲಕನಂದಾ ಮಳಗಿ, ಬೀರಪ್ಪ ಅಂಡಗಿ, ಮುಸ್ತಫಾ ಕುದರಿಮೋತಿ, ಶಿವಪ್ಪ ಜೋಗಿ, ಶಂಕರಗೌಡ ಮಾಲಿಪಾಟೀಲ, ಸುಶಿಲೇಂದ್ರರಾವ್ ದೇಶಪಾಂಡೆ, ಕಾರ್ಯದರ್ಶಿ ರಾಮಣ್ಣ ಶ್ಯಾವಿ, ರಾಮಣ್ಣ ಕಳ್ಳಿಮನಿ, ಕ್ರೀಡಾ ಕಾರ್ಯದರ್ಶಿಗಳಾದ ಬಸವರಾಜಎಚ್, ಶರಣಬಸಪ್ಪ ಮಣ್ಣೂರು, ಅವಿನಾಶ ಎಂ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೌಕರರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು, ಅಂಗವಿಕಲ ನೌಕರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT