ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ; ಧನಂಜಯ ಮಾಲಗಿತ್ತಿ

Last Updated 20 ಮಾರ್ಚ್ 2022, 5:48 IST
ಅಕ್ಷರ ಗಾತ್ರ

ಕನಕಗಿರಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮೂಲದ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಸಹಕಾರಿಯಾಗಿದೆ ಎಂದು ತಹಶೀಲ್ದಾರ್ ಧನಂಜಯ ಮಾಲಗಿತ್ತಿ ಹೇಳಿದರು.

ತಾಲ್ಲೂಕಿನ ಜೀರಾಳ ಕಲ್ಗುಡಿ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಜನರ ಸಮಸ್ಯೆ ಗಳನ್ನು ಆಲಿಸಲಾಗುತ್ತಿದೆ. ಸ್ಥಳದಲ್ಲಿ ಬಗೆಹರಿಯಬಹುದಾದ ಸಮಸ್ಯೆ ಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲಾಗುತ್ತದೆ. ಕ್ಲಿಷ್ಟಕರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸ ಲಾಗುವುದು ಎಂದು ಅವರು ತಿಳಿಸಿದರು.

ಸಾರ್ವಜನಿಕರು, ರೈತರು ತಮ್ಮ ಕಾರ್ಯಗಳಿಗಾಗಿ ತಹಶೀಲ್ದಾರ್ ಕಚೇರಿ ಸೇರಿದಂತೆ ಇತರೆ ಕಚೇರಿ ಗಳಿಗೆ ಅಲೆದಾಡುವುದು ತಪ್ಪಲಿದೆ. ಇಲ್ಲಿ ಸಲ್ಲಿಕೆಯಾದ ಅರ್ಜಿಗಳ ವಿಲೇವಾ ರಿಯಲ್ಲಿ ಅಧಿಕಾರಿ ಗಳು ವಿಫಲರಾದರೆ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯ ಲಾಗುವುದು ಎಂದರು.

120 ಅರ್ಜಿಗಳು ಸಲ್ಲಿಕೆಯಾದವು. ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ ಲಚಮಪ್ಪ, ಉಪಾಧ್ಯಕ್ಷೆ ವಿಜಯ ಸಕ್ರಪ್ಪ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಕ ಎಂಜಿನಿಯರ್ ಶಿವಕುಮಾರ, ಗ್ರೇಡ-2 ತಹಶೀಲ್ದಾರ್ ಮಹಾಂತಗೌಡ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವೀರಣ್ಣ ನೆಕ್ರಳ್ಳಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ತುಗಲಪ್ಪ ದೇಸಾಯಿ, ಅಧಿಕಾರಿಗಳಾದ ಶಿವಕುಮಾರ, ಬಸವರಾಜ, ಡಾ.ರಾಮಪ್ಪ, ಎನ್, ರಾಜಶೇಖರ, ಬಿ. ಶಕುಂತಲಾ, ರವಿ, ಪ್ರಕಾಶ, ಬಸವರಾಜ ಅಂಗಡಿ, ಮಹೇಬೂಬ್, ಚನ್ನಪ್ಪ ಇದ್ದರು.

‘ಜನರ ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ‘

ಕುಕನೂರು: ತಾಲ್ಲೂಕಿನ ಬೆಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ನೀಡಲು ಈ ಕಾರ್ಯಕ್ರಮ ನಡೆಸ ಲಾಗುತ್ತಿದೆ. ಹಲವು ವರ್ಷಗಳಿಂದ ಬಾಕಿ ಉಳಿದ ಪಹಣಿ ಯಲ್ಲಿನ ದೋಷ ಸರಿ ಪಡಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ವೀರಾಪುರ, ಸುತ್ತಲಿನ ಗ್ರಾಮಸ್ಥರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಆಗಮಿಸಿದ್ದು, ಗ್ರಾಮಸ್ಥರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಮಳಿಗೆಗೆ ಭೇಟಿ ನೀಡಿ, ಪರಿಹರಿಸಿಕೊಳ್ಳಬೇಕು. ಅಧಿಕಾರಿಗಳು ಎಷ್ಟು ಅರ್ಜಿ ಬಂದಿವೆ, ಅದರಲ್ಲಿ ಎಷ್ಟು ಅರ್ಜಿ ಪರಿಹರಿಸಿದ್ದಾರೆ ಎನ್ನುವುದನ್ನು ಖಾತ್ರಿ ಪಡಿಸುತ್ತಾರೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಸ್ತೂರೆವ್ವ ನಿಂಗಪ್ಪ ಹಂಚಿನಾಳ, ಉಪಾಧ್ಯಕ್ಷ ವಿರೂಪಾಕ್ಷಪ್ಪ ಪೂಜಾರ್, ಶರಣಪ್ಪಗೌಡ ಮಾಲಿಪಾಟೀಲ, ಗ್ರೇಡ್-2 ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣನವರ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವೆಂಕಟೇಶ್ ವಂದಾಲಿ, ಶರಣಪ್ಪ ಕೊಪ್ಪದ ಇದ್ದರು.

76 ಅರ್ಜಿ ಸಲ್ಲಿಕೆ; 53 ಅರ್ಜಿ ಇತ್ಯರ್ಥ

ಯರಡೋಣ (ಕಾರಟಗಿ): ನನೆಗುದಿಗೆ ಬಿದ್ದ ಅರ್ಜಿಗಳನ್ನು ಜನರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಯಲ್ಲಿ ಪಾಲ್ಗೊಂಡು ಅವುಗಳಿಗೆ ಪರಿಹಾರ ಪಡೆಯಬೇಕು ಎಂದು ತಹಶೀಲ್ದಾರ್ ರವಿ ಎಸ್.‌ ಅಂಗಡಿ ಹೇಳಿದರು.

ಯರಡೋಣದಲ್ಲಿ ಶನಿವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಉದ್ದೇಶದಿಂದ ಪ್ರತಿ ತಿಂಗಳು ಈ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದರು.

ಕಂದಾಯ ಇಲಾಖೆ– 36, ಪಂಚಾಯತ್ ರಾಜ್ ಇಲಾಖೆ– 21, ಶಿಕ್ಷಣ– 5, ಆರೋಗ್ಯ– 2, ಭೂಮಾಪಾನ– 3, ಜೆಸ್ಕಾಂ– 5, ಅಬಕಾರಿ, ಲೋಕೋಪಯೋಗಿ, ಬ್ಯಾಂಕ್, ಸಾರಿಗೆ ಇಲಾಖೆಗಳ ತಲಾ 1 ಅರ್ಜಿ ಸೇರಿ ಒಟ್ಟು 76 ಅರ್ಜಿಗಳು ಸಲ್ಲಿಕೆಯಾದವು. ಈ ಪೈಕಿ 53 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಲಾಗಿದೆ. 23 ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗೆ ಪರಿಹಾರಕ್ಕೆ ಯತ್ನಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ತಾ.ಪಂ ಇಒ ಕೆ. ವಿ. ಕಾವ್ಯರಾಣಿ, ಗ್ರೇಡ್-2 ತಹಶೀಲ್ದಾರ್ ವಿಶ್ವನಾಥ ಮುರಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ, ಉಪಾಧ್ಯಕ್ಷೆ ಮಾಳಮ್ಮ ವಿವಿಧ ಇಲಾಖೆಗಳ ಅಧಿಕಾರಿಗಳಾದ ಸುಮಂಗಲಾ, ನಾಗರಾಜ, ಮಂಜುನಾಥ ರಾಠೋಡ, ದೇವೇಂದ್ರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಚಂದ್ರುಗೌಡ ಯರಡೋಣ, ಮುಖಂಡ ಶಿವಶರಣೇಗೌಡ ಯರಡೋಣಾ, ರೈತ ಮುಖಂಡ ಶರಣೇಗೌಡ, ಪಾಲಾಕ್ಷಗೌಡ, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT