ಮಂಗಳವಾರ, ಆಗಸ್ಟ್ 16, 2022
21 °C

ಗ್ರಾ.ಪಂ ಚುನಾವಣೆ: ಸಾರ್ವಜನಿಕರೊಂದಿಗೆ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಕನೂರು: ತಾಲ್ಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರ್‌ ಹಾಗೂ ಚುನಾವಣಾ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಬುಧವಾರ ಸಭೆ ನಡೆಸಿದರು.

ಬೈರನಾಯಕನಹಳ್ಳಿ ಗ್ರಾಮದವರು ತಮ್ಮ ಗ್ರಾಮವನ್ನು ಕುದುರಿಮೋತಿ ಗ್ರಾಮ ಪಂಚಾಯಿತಿಯಿಂದ ನೆಲಜೇರಿ ಗ್ರಾಮ ಪಂಚಾಯಿತಿಗೆ ಸೇರಿಸಬೇಕು ಎಂದು ಬಹಳ ದಿನಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಅವರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಬೇಕೆಂದೂ ತೀರ್ಮಾನಿಸಿದ್ದರು. ಅದನ್ನು ಮನಗಂಡ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರು ಗ್ರಾಮದಲ್ಲಿ ಸಭೆ ನಡೆಸಿ ಸಾರ್ವಜನಿಕರ ಜತೆ ಮಾತನಾಡಿ ಚುನಾವಣೆಯನ್ನು ಬಹಿಷ್ಕರಿಸಬೇಡಿ, ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ತಿಳಿಸಿದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ, ಚುನಾವಣಾ ನೋಡಲ್ ಅಧಿಕಾರಿ ಸಿದ್ದೇಶ ಹಾಗೂ ಪಿಎಸ್ಐ ಶೀಲಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು