ಸೋಮವಾರ, ಜನವರಿ 18, 2021
25 °C

ಮಕ್ಕಳ ಸಮಸ್ಯೆ ಆಲಿಸಿದ ಅಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕಿನ ಆನೆಗೊಂದಿ ಗ್ರಾಮ ಪಂಚಾಯಿತಿ ವತಿಯಿಂದ ವಿಶೇಷ ಅಗತ್ಯವುಳ್ಳ ಮಕ್ಕಳ ವಿಶೇಷ ಗ್ರಾಮಸಭೆ ಶನಿವಾರ ನಡೆಯಿತು.

ತಾಲ್ಲೂಕಿನ ಆನೆಗೊಂದಿ, ಸಂಗಾಪುರ, ಮಲ್ಲಾಪುರ ಹಾಗೂ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6 ರಿಂದ 18 ವರ್ಷದ ವಿಶೇಷ ಅಗತ್ಯವುಳ್ಳ ಮಕ್ಕಳು ಭಾಗವಹಿಸಿದ್ದರು.

ವೇದಿಕೆ ಮೇಲೆ ಮಕ್ಕಳು ಮಾತ್ರ ಅತಿಥಿ ಸ್ಥಾನಗಳನ್ನು ಅಲಂಕರಿಸಿದ್ದರು. ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ್‌, ಸಿಡಿಪಿಒ ಗಂಗಪ್ಪ, ತಾ.ಪಂ ಸದಸ್ಯ ವೈ.ರಮೇಶ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಅಂಜನಾದೇವಿ ಮಕ್ಕಳ ಸಮಸ್ಯೆಗಳನ್ನು ಆಲಿಸಿದರು.

ನಂತರ ಮಕ್ಕಳಿಗೆ ವಿಶೇಷ ಕ್ರೀಡಾಕೂಟ ನಡೆಸಲಾಯಿತು. ಈ ವೇಳೆ 50ಕ್ಕೂ ಹೆಚ್ಚು ಮಕ್ಕಳು ಹಾಗೂ ಪಾಲಕರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು