ಸಣಾಪುರ (ಗಂಗಾವತಿ): ಆನೆಗೊಂದಿಯನ್ನು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕೇಂದ್ರ ಸ್ಥಾನವನ್ನಾಗಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಸಣಾಪುರ ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಗ್ರಾ.ಪಂ ಉಪಾಧ್ಯಕ್ಷ ಶೇರ್ಖಾನ್ ಮಾತನಾಡಿ,‘ಆನೆಗೊಂದಿ ಸುತ್ತಮುತ್ತ ಪ್ರೇಕ್ಷಣೀಯ ಸ್ಥಳಗಳಿವೆ. ಹಂಪಿಯೂ ಹತ್ತಿರದಲ್ಲಿದೆ. ಆದ್ದರಿಂದ ಅದನ್ನು ಜಿ.ಪಂ ಕ್ಷೇತ್ರದ ಕೇಂದ್ರ ಸ್ಥಾನವನ್ನಾಗಿ ಮುಂದುವರಿಸಿದರೆ, ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದು ತಿಳಿಸಿದರು.

ಸಣಾಪುರ, ಸಂಗಾಪುರ, ಮಲ್ಲಾಪುರ ಹಾಗೂ ಆನೆಗೊಂದಿ ಸುತ್ತಮುತ್ತಲಿನ ಗ್ರಾಮಗಳ ಜನರು ಸಹ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

ಸದಸ್ಯರಾದ ಅಶೋಕ, ರಾಘು, ನಾಸಗೇಂದ್ರ, ಕೆ.ನಾಗೇಶ, ಸಂತೋಷಮ್ಮ ಹಾಗೂ ಡಿಎಸ್ಎಸ್ ಸಂಚಾಲಕ ರಾಜರತ್ನಂ ಹಾಗೂ ಕರಿಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.