ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ಹೆಚ್ಚಳ: ಎಚ್ಚೆತ್ತುಕೊಳ್ಳದ ಗ್ರಾ.ಪಂ

ಮುದೇನೂರು: ನಿಯಮಿತವಾಗಿ ಬಾರದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
Last Updated 26 ಏಪ್ರಿಲ್ 2021, 12:14 IST
ಅಕ್ಷರ ಗಾತ್ರ

ಮುದೇನೂರು (ತಾವರಗೇರಾ): ಸಮೀಪದ ಮುದೇನೂರು ಗ್ರಾಮದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಗ್ರಾಮ ಪಂಚಾಯಿತಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಯಾವ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಂಡಿಲ್ಲ.

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಒಂದು ತಿಂಗಳಲ್ಲಿ ಸುಮಾರು 60 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಆರೋಗ್ಯ ಇಲಾಖೆ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೊರೊನಾ ಹಾಗೂ ಲಸಿಕೆ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಕಳೆದ ನಾಲ್ಕು ತಿಂಗಳಿಂದ ಇಲ್ಲಿನ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿ ನಿಯಮಿತವಾಗಿ ಬರುತ್ತಿಲ್ಲ. ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರುತ್ತಾರೆ.

ಗ್ರಾಮದಲ್ಲಿ ಸ್ವಚ್ಛತೆ ಸಹ ಮರೀಚಿಕೆಯಾಗಿದೆ. ಚರಂಡಿ, ರಸ್ತೆ ಸೇರಿದಂತೆ ಅನೇಕ ಕಡೆ ನೀರು ಸಂಗ್ರಹವಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.

ಕನಿಷ್ಠ ಪಕ್ಷ ನಿಯಮಿತವಾಗಿ ಕಚೇರಿಗೆ ಬಂದು ಕೋವಿಡ್ ಆಗು–ಹೋಗುಗಳ ಕುರಿತು ಸಭೆ ನಡೆಸಬೇಕು. ಅದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT