ಮಂಗಳವಾರ, ಮಾರ್ಚ್ 28, 2023
31 °C

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ನಗರದ 16ನೇ ವಾರ್ಡ್‌ನ ಅಂಗನವಾಡಿ ಕಟ್ಟಡಕ್ಕೆ ತಕ್ಷಣ ₹25 ಲಕ್ಷ ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳಾ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ನಗರಸಭೆ ಸದಸ್ಯ ಸೋಮಣ್ಣ ಹಳ್ಳಿ ಮನವಿ ಸಲ್ಲಿಸಿ ಒತ್ತಾಯಿಸಿದರು. 16ನೇ ವಾರ್ಡ್‌ನಲ್ಲಿ ಅಂಗನವಾಡಿ ಕಟ್ಟಡವಿಲ್ಲದೇ ಮಕ್ಕಳಿಗೆ ಸಾಕಷ್ಟು ತೊಂದರೆಯಾಗಿದ್ದು, ಇಲ್ಲಿ ಮಕ್ಕಳಿಗೆ ಅಂಗನವಾಡಿ ಕಟ್ಟಡ ಅತ್ಯಾವಶ್ಯಕವಾಗಿದೆ. ಈಗಾಗಲೇ ಸಂಸದರಾದ ಸಂಗಣ್ಣ ಕರಡಿ ಹಾಗೂ ಜಿಲ್ಲಾಧಿಕಾರಿ ಆದೇಶ ನೀಡಿದ್ದರೂ ಇದನ್ನು ಗಾಳಿಗೆ ತೂರಿದ್ದು, ಕೂಡಲೇ ₹25 ಲಕ್ಷ ಅಂದಾಜು ಮೊತ್ತ ಇದ್ದು ಕೂಡಲೇ ಅನುದಾನ ನೀಡಬೇಕು ಎಂದು ಹೇಳಿದರು. ವಾರ್ಡ್‌ನಲ್ಲಿ ಜಾಗ ಇದ್ದು, ಕಟ್ಟಡಕ್ಕೆ ಅನುಮತಿ ನೀಡಿ ಇದುವರೆಗೂ ಕಟ್ಟಡ ನಿರ್ಮಾಣವಾಗದೇ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದು, ಅಂಗನವಾಡಿ ಕಟ್ಟಡ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಈ ಬಾಡಿಗೆ ಕಟ್ಟಡದಲ್ಲಿ ಮುಂದುವರಿಯಲು ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖಂಡರಾದ ಅಬ್ದುಲ್ ಅವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.