ಕನಕಗಿರಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ತಾಲ್ಲೂಕಿನ ಹುಲಿಹೈದರ ಗ್ರಾಮ ಪಂಚಾಯಿತಿಗೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಪಂಚಾಯಿತಿ ಬಾಪೂಜಿ ಸೇವಾ ಕೇಂದ್ರದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ನೋಂದಾಯಿಸುವ ಪ್ರಕ್ರಿಯೆ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫಲಾನುಭವಿಗಳನ್ನು ಗುರುತಿಸುವ ಕೆಲಸವನ್ನು ಇಲ್ಲಿನ ಸಿಬ್ಬಂದಿ ಮಾಡಬೇಕು. ಅಂಗನವಾಡಿ ಕಾರ್ಯಕರ್ತರಿಂದ ಫಲಾನುಭವಿಗಳ ಪಟ್ಟಿ ಪಡೆಯುವುದಲ್ಲದೇ ಅವರನ್ನು ಸಂಪರ್ಕಿಸಿ ಅರ್ಜಿಗಳನ್ನು ನೋಂದಾಯಿಸಬೇಕು ಎಂದು ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮರೇಶ್ ರಾಥೋಡ್, ಅಂಗನವಾಡಿ ಮೇಲ್ವಿಚಾರಕಿ ಸುಕನ್ಯಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.