ಕೊಪ್ಪಳ: ನಗರಕ್ಕೆ ಹೊಂದಿಕೊಂಡು ನಿರ್ಮಿಸಲಾಗುತ್ತಿರುವ ಬಿಎಸ್ಪಿಎಲ್ ಉಕ್ಕಿನ ಕಾರ್ಖಾನೆ ಆರಂಭದ ವಿರೋಧದ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಲ್ಲಿನ ವೀರೇಶ ಮಹಾಂತಯ್ಯನಮಠ ಅವರು ಗುರುವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರ ಮನೆಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿ, ಪ್ರಸ್ತುತ ಕಾರ್ಖಾನೆ ಆರಂಭದಿಂದ ಎದುರಾಗಲಿರುವ ಸಮಸ್ಯೆಗಳ ಕುರಿತು ಮಹಾಂತಯ್ಯನಮಠ ಅವರು ಮನವರಿಕೆ ಮಾಡಿದರು.

ಕಾರ್ಖಾನೆ ಆರಂಭಕ್ಕೆ ಈಗಾಗಲೇ ಜನರಿಂದ ವಿರೋಧ ವ್ಯಕ್ತವಾಗಿದೆ. ಈಚೆಗೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿದೆ. ಹೀಗಾಗಿ ನೀವು ಕೇಂದ್ರ ಸರ್ಕಾರ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆಯ ಸಚಿವರಾದ ಭೂಪೇಂದ್ರ ಯಾದವ ಅವರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ಪರಿಸರ ಇಲಾಖೆಯ ಅನುಮತಿ ಕೊಡಿಸದಂತೆ ಮಾತನಾಡಿ ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ದೇವೇಗೌಡರು ಕಾರ್ಖಾನೆ ನಿರ್ಮಾಣಕ್ಕೆ ಗವಿಶ್ರೀಗಳ ನೇತೃತ್ವದಲ್ಲಿ ಎಲ್ಲಾ ಧರ್ಮ ಗುರುಗಳು ಹಾಗೂ ಸಂಘಟನೆಗಳು ವಿರೋಧಿಸಿರುವುದನ್ನು ಗಮನಿಸಿದ್ದೇನೆ. ನಿಮ್ಮ ಹೋರಾಟಕ್ಕೆ ನನ್ನ ಬೆಂಬಲವಿದ್ದು, ಕೊಪ್ಪಳ ಜಿಲ್ಲೆಯ ಜನರಿಗೆ ಅನುಕೂಲವಾಗುವಂತೆ ಮಾಡಲು ಪ್ರಯತ್ನ ಮಾಡುವೆ ಎಂದು ದೇವೇಗೌಡರು ಹೇಳಿದ್ದಾರೆ ಎಂದು ಮಹಾಂತಯ್ಯನಮಠ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.