ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸ್ಟೆಲ್‌ ಉದ್ಘಾಟಿಸಲಿರುವ ಹಾಜಬ್ಬ

Published 28 ಜೂನ್ 2024, 16:13 IST
Last Updated 28 ಜೂನ್ 2024, 16:13 IST
ಅಕ್ಷರ ಗಾತ್ರ

ಕೊಪ್ಪಳ: ಇಲ್ಲಿನ ಗವಿಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಗವಿಸಿದ್ಧೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಪೂರ್ಣಗೊಂಡ ಹಾಸ್ಟೆಲ್‌ ಕಟ್ಟಡವನ್ನು ಅಕ್ಷರ ಸಂತ ಎಂದೇ ಹೆಸರಾದ ದಕ್ಷಿಣ ಕನ್ನಡ ಜಿಲ್ಲೆಯ ಅರೆಕಳ ಗ್ರಾಮದ ಹಾಜಬ್ಬ ಉದ್ಘಾಟಿಸಲಿದ್ದಾರೆ.

ಸರ್ಕಾರಿ ಶಾಲೆಗಾಗಿ ಭೂಮಿ ದಾನ ಕೊಟ್ಟ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಿಳೆ ಕೊಪ್ಪಳ ತಾಲ್ಲೂಕಿನ ಕುಣಿಕೇರಿ ಗ್ರಾಮದ ಹುಚ್ಚಮ್ಮ ಚೌದ್ರಿ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಮಠದ ಹಳೆಯ ವಿದ್ಯಾರ್ಥಿಗಳು, ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠದ ಅನ್ನದಾನೀಶ್ವರ ಮಹಾಶಿವಯೋಗಿಗಳು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ಗವಿಮಠದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT