ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ. ಪರಮೇಶ್ವರಗೆ ಉಪ ಮುಖ್ಯಮಂತ್ರಿ ಸ್ಥಾನ

Last Updated 22 ಮೇ 2018, 14:16 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಜಿ. ಪರಮೇಶ್ವರ ಅವರು ಉಪ ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಎಚ್‌.ಡಿ. ಕುಮಾರಸ್ವಾಮಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭ ಬುಧವಾರ ಸಂಜೆ 4.30ಕ್ಕೆ ನಡೆಯಲಿದೆ. ಇದೇ ವೇಳೆ, ಪರಮೇಶ್ವರ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಯಾದಿಯಲ್ಲಿ ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್‌, ಮಧ್ಯಕರ್ನಾಟಕದಿಂದ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ, ಎಂ.ಬಿ. ಪಾಟೀಲ್ ಮತ್ತಿತರರ ಹೆಸರೂ ಕೇಳಿಬಂದಿತ್ತು. ಡಿ.ಕೆ. ಶಿವಕುಮಾರ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಆಗ್ರಹವೂ ವ್ಯಕ್ತವಾಗಿತ್ತು. ಮತ್ತೊಂದೆಡೆ, ಉತ್ತರ ಕರ್ನಾಟಕ ಭಾಗದ ನಾಯಕರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಕೂಗೂ ಕೇಳಿಬಂದಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT