ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ಅಂಜನಾದ್ರಿಯಲ್ಲಿ ಹನುಮಮಾಲೆ ವಿಸರ್ಜನೆ ಸಂಭ್ರಮ

Published 24 ಡಿಸೆಂಬರ್ 2023, 14:50 IST
Last Updated 24 ಡಿಸೆಂಬರ್ 2023, 14:50 IST
ಅಕ್ಷರ ಗಾತ್ರ

ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾಧಾರಿಗಳು ಭಾನುವಾರ ಮಾಲೆ ವಿಸರ್ಜನೆ ಮಾಡಿ ಸಂಭ್ರಮಿಸಿದರು.

ಶನಿವಾರ ರಾತ್ರಿಯಿಂದಲೇ ಮಾಲೆ ವಿಸರ್ಜನೆ ಆರಂಭವಾಗಿ ಭಾನುವಾರ ಸಂಜೆ ತನಕ ನಡೆಯಿತು. ಬೆಳಗಾವಿ, ಕಲಬುರಗಿ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಹನುಮ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಥರಗುಟ್ಟುವ ಚಳಿ, ದಟ್ಟ ಮಂಜಿನ ವಾತಾವರಣದ ನಡುವೆಯೂ ಜಿಲ್ಲೆ ಹಾಗೂ ಸುತ್ತಮುತ್ತಲಿನ ಊರಿನ ಮಾಲಾಧಾರಿಗಳು ತಮ್ಮೂರಿನಿಂದ ಪಾದಯಾತ್ರೆ ಮೂಲಕ ಅಂಜನಾದ್ರಿಗೆ ಬಂದಿದ್ದರು.

ಭಕ್ತರಿಗೆ ಜಿಲ್ಲಾಡಳಿತದ ವತಿಯಿಂದಲೇ ಊಟದ ವ್ಯವಸ್ಥೆ ಮಾಡಲಾಗಿತ್ತು. ಒಂದು ದಿನ ಮೊದಲು ಬಂದವರಿಗೆ ವಸತಿ ಸೌಲಭ್ಯ ಕೂಡ ಕಲ್ಪಿಸಲಾಗಿತ್ತು. ಮಾಲೆ ಧರಿಸಿದ್ದ ಶಾಸಕ ಜನಾರ್ದನ ರೆಡ್ಡಿ ಭಕ್ತರ ನಡುವೆ ಬಂದು ಮಾಲೆ ವಿಸರ್ಜನೆ ಮಾಡಿದರು.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಭಾನುವಾರ ಹನುಮ ಮಾಲಾಧಾರಿಗಳು ಮಾಲೆ ವಿಸರ್ಜನೆ ಮಾಡಲು ಬಂದ ಚಿತ್ರಣ ಸೂರ್ಯೋದಯದ ಹೊಳಪಿನಲ್ಲಿ ಕಂಗೊಳಿಸಿದ್ದು ಹೀಗೆ
–ಪ್ರಜಾವಾಣಿ ಚಿತ್ರ/ ಭರತ್‌ ಕಂದಕೂರ
ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಭಾನುವಾರ ಹನುಮ ಮಾಲಾಧಾರಿಗಳು ಮಾಲೆ ವಿಸರ್ಜನೆ ಮಾಡಲು ಬಂದ ಚಿತ್ರಣ ಸೂರ್ಯೋದಯದ ಹೊಳಪಿನಲ್ಲಿ ಕಂಗೊಳಿಸಿದ್ದು ಹೀಗೆ –ಪ್ರಜಾವಾಣಿ ಚಿತ್ರ/ ಭರತ್‌ ಕಂದಕೂರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT