ಹನುಮಸಾಗರ: ಪಟ್ಟಣದಲ್ಲಿ ಎಸೆದಿರುವ ಕಸದ ರಾಶಿ ಹಾಗೂ ದುರ್ವಾಸನೆಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓದಾಡುವ ಪರಿಸ್ಥಿತಿ ನಿವಾರಣೆ ಪಟ್ಟಣ ಪಂಚಾಯಿತಿ ಮುಂದಾಗಿದೆ.

ಪಂಚಾಯಿತಿ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಕಸದ ರಾಶಿಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಪಟ್ಟಣ ಪಂಚಾಯತಿ ಹಿಂಭಾಗದಲ್ಲಿನ ಕಸದ ರಾಶಿ, ಪ್ರಮುಖ ರಸ್ತೆ ಬದಿಗಳಲ್ಲಿ ಸಂಗ್ರಹವಾಗಿದ್ದ ಕಸವನ್ನು ತೆರವುಗೊಳಿಸಲಾಗಿದೆ.

ಪಟ್ಟಣದ ಜನರು ಕಸದ ರಾಶಿಯಿಂದ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ‘ಕಸದ ರಾಶಿಗೆ ನರಳುತ್ತಿದೆ ಹನುಮಸಾಗರ’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ಪಟ್ಟಣ ಪಂಚಾಯಿತಿ ಹಾಗೂ ಮೇಲಾಧಿಕಾರಿಗಳು ತಕ್ಷಣ ಸ್ಪಂದಿಸಿದೆ. ಪಟ್ಟಣಕ್ಕೆ ಶಾಶ್ವತ ಪರಿಹಾರವಾಗಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಆರಂಭಿಸಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.