ಹನುಮಸಾಗರ: ಪಟ್ಟಣದ ಗಾಂಧಿ ಸರ್ಕಲ್ ಸಮೀಪದಲ್ಲಿರುವ ಶಿವಪ್ಪ ಜಂಬಣ್ಣ ಶೀಲವಂತರ ಎಂಬುವರ ಕಿರಾಣಿ ಅಂಗಡಿಗೆ ಗುರುವಾರ ಬೆಳಿಗ್ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಸಾಮಗ್ರಿ ಸುಟ್ಟು ಕರಕಲಾಗಿದೆ.

ಅಂಗಡಿಯಲ್ಲಿದ್ದ ಬಿಸ್ಕಟ್, ಕುರಕುರಿ, ಗೋಡಂಬಿ ಸೇರಿದಂತೆ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಸುಮಾರು ₹8 ಲಕ್ಷಕ್ಕೂ ಹೆಚ್ಚು ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಲು ಮುಂದಾದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಸಂಪೂರ್ಣ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಶಾಸಕ ದೊಡ್ಡನಗೌಡ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ‘ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದು ಶೀಘ್ರದಲ್ಲೇ ಸರ್ಕಾರದಿಂದ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ಪುತ್ರ ದೊಡ್ಡಬಸನಗೌಡ ಬಯ್ಯಾಪುರ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಧೈರ್ಯ ತುಂಬಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-35-231235230

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.