ಕೊಪ್ಪಳ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನೆಲೆಯಲ್ಲಿ ಶನಿವಾರ ಆರಂಭವಾದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ನಗರದ ಬಹಳಷ್ಟು ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಿದವು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮಕ್ಕಳಿಂದ ಜಾಗೃತಿ ರ್‍ಯಾಲಿ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸ್ತಬ್ದಚಿತ್ರ ವಾಹನದ ಮೆರವಣಿಗೆ ನಡೆಯಿತು.ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ಮಕ್ಕಳಿಂದ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಚಾಲನೆ ಕೊಟ್ಟರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪ ವಿಭಾಗಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಾಣೇಶ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಕೆ.ಕೆ.ಆರ್.ಟಿ.ಸಿ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ ಮುಲ್ಲಾ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ಬಿಜೆಪಿ ಆಚರಣೆ: ಇಲ್ಲಿನ ಭಾಗ್ಯನಗರದ ಅಂಬಾಭವಾನಿ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಬಿಜೆಪಿಯಿಂದ ತಿರಂಗಾ ನಡಿಗೆ ಕಾರ್ಯಕ್ರಮ ನಡೆಯಿತು.

ಸಂಸದ ಸಂಗಣ್ಣ ಕರಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಬಳ್ಳಾರಿ ವಿಭಾಗ ಸಹ ಪ್ರಭಾರಿ ಚಂದ್ರಶೇಖರ್ ಪಾಟೀಲ ಹಲಗೇರಿ, ಪಕ್ಷದ ಪ್ರಮುಖರಾದ ಅಮರೇಶ ಕರಡಿ, ಸಿ.ವಿ. ಚಂದ್ರಶೇಖರ್, ರಾಘವೇಂದ್ರ ಪಾನಘಂಟಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಅಭಿಯಾನಕ್ಕೆ ಸ್ವಾತಂತ್ರ್ಯ ಯೋಧರಿಂದ ಚಾಲನೆ

ಕೊಪ್ಪಳ: ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಎನ್‍ಸಿಸಿ ಘಟಕ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆ ಜಂಟಿಯಾಗಿ ತಿರಂಗ ಅಭಿಯಾನದ ಪಥ ಸಂಚಲನಕ್ಕೆ ಸ್ವಾತಂತ್ರ್ಯ ಹೋರಾಟಗಾರ ನಾರಾಯಣಚಾರ್ ಮಾದಿನೂರು ಚಾಲನೆ ನೀಡಿದರು.

ಸಂಸ್ಥೆಯ ಪ್ರತಿನಿಧಿಯಾಗಿ ಸಂಜಯ ಕೋತ್ಬಾಳ, ಮರಿಗೌಡ್ರ, ಎನ್‍ಸಿಸಿ ಘಟಕ ದಯಾನಂದ ಸಾಳುಂಕಿ, ಬಸವರಾಜ ಪೂಜಾರ, ಶರಣಬಸಪ್ಪ ಬಿಳಿಏಲಿ, ಸಿದ್ದಲಿಂಗಪ್ಪ ಕೊಟ್ನೆಕಲ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ಸೋಮರಡ್ಡಿ ಅಳವಂಡಿ, ನಿರ್ದೇಶಕರಾದ ಡಾ. ಶ್ರೀನಿವಾಸ ಹ್ಯಾಟಿ, ಉಪಾಧ್ಯಕ್ಷರಾದ ಡಾ. ಗವಿ ಪಾಟೀಲ್, ಡಾ. ಶಿವನಗೌಡ, ಸುಧೀರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.