ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಎಸ್‌ಐ ಸಾವಿಗೆ ಶಾಸಕರ ಕಿರುಕುಳ ಕಾರಣ; ಪ್ರಗತಿಪರ ಸಂಘಟನೆ ಆರೋಪ

Published : 3 ಆಗಸ್ಟ್ 2024, 15:36 IST
Last Updated : 3 ಆಗಸ್ಟ್ 2024, 15:36 IST
ಫಾಲೋ ಮಾಡಿ
Comments

ಕನಕಗಿರಿ (ಕೊಪ್ಪಳ ಜಿಲ್ಲೆ): ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮದ ಪರಶುರಾಮ ಚಲವಾದಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಮುಖಂಡ ಪಾಮಣ್ಣ ಅರಳಿಗನೂರು ಮಾತನಾಡಿ ‘ಪರಶುರಾಮ ಅವರು ನಗರ ಠಾಣೆಯಿಂದ ಸೈಬರ್ ಕ್ರೈಂ ಪೊಲೀಸ್‌ ಠಾಣೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವಿತ್ತು. ಅದನ್ನು ಮುಗಿಸಿಕೊಂಡ ನಂತರ ಮನೆಯಲ್ಲಿ ಮೃತಪಟ್ಟಿರುವುದು ಸಂಶಯಕ್ಕೆ ಕಾರಣವಾಗಿದೆ’ ಎಂದರು.

‘ಯಾದಗಿರಿ ವಿಧಾನಭಾ ಕ್ಷೇತ್ರದ ಶಾಸಕ ಚನ್ನರೆಡ್ಡಿ ಪಾಟೀಲ ಹಾಗೂ ಅವರ ಪುತ್ರನ ಕಿರುಕುಳವೇ ಸಾವಿಗೆ ಕಾರಣ ಎಂದು ಪತ್ನಿ ದೂರಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಗರ ಠಾಣೆಯಲ್ಲಿ ಉಳಿಯಲು ₹30ರಿಂದ ₹40ಲಕ್ಷ ಲಂಚಕ್ಕೆ ಶಾಸಕರು ಬೇಡಿಕೆ ಇಟ್ಟಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಅವರ ಪತ್ನಿ ಹೇಳಿಕೆ ನೀಡಿದ್ದಾರೆ’ ಎಂದರು.

‘ರಾಜ್ಯದ ಪರಿಶಿಷ್ಟ ಜಾತಿಯ ಸರ್ಕಾರಿ ನೌಕರರು ರಾಜಕೀಯ ನಾಯಕರ ಒತ್ತಡಕ್ಕೆ ಒಳಗಾಗಿ ಮಾನಸಿಕ ಹಿಂಸೆ ಮತ್ತು ದೌರ್ಜನ್ಯಕ್ಕೆ ಒಳಗಾಗಿ ಮೃತಪಡುತ್ತಿದ್ದಾರೆ’ ಎಂದು ಆರೋಪಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯ ಶೇಷಪ್ಪ ಪೂಜಾರ, ಪ್ರಮುಖರಾದ ವೆಂಕಟೇಶ ನೀರ್ಲೂಟಿ, ನಿಂಗಪ್ಪ ಪೂಜಾರ, ಮಕ್ತಮಸಾಬ, ತಿಮ್ಮಣ್ಣ ಛಲವಾದಿ, ನೀಲಕಂಠ ಬಡಿಗೇರ, ಅನ್ನು ಚಳ್ಳಮರದ, ಸಣ್ಣ ದುರಗಪ್ಪ, ಉಮೇಶ ಮ್ಯಾಗಡೆ , ಮಂಜುನಾಥ ಯಾದವ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT