ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಟ್ಟಿ ಗ್ರಾ.ಪಂ.: ಪರವೀನಬಾಬು ಅಧ್ಯಕ್ಷ

Published 20 ಜುಲೈ 2023, 11:33 IST
Last Updated 20 ಜುಲೈ 2023, 11:33 IST
ಅಕ್ಷರ ಗಾತ್ರ

ಅಳವಂಡಿ: ಸಮೀಪದ ಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪರವೀನಬಾಬು ಆಲೂರ ಹಾಗೂ ಉಪಾಧ್ಯಕ್ಷರಾಗಿ ನಿಂಗನಗೌಡ ಪಾಟೀಲ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಪರವೀನಬಾನು ಆಲೂರ ಹಾಗೂ ಪುಷ್ಪಾ ಸಂಗರಡ್ಡಿ ನಾಮಪತ್ರ ಸಲ್ಲಿಸಿದ್ದರು. ಪರವಿನಬಾನು 13 ಮತ ಹಾಗೂ ಪುಷ್ಪಾ 6 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ನಿಂಗನಗೌಡ ಪಾಟೀಲ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಎಡಿಎ ಜೀವನಸಾಬ ಕುಷ್ಟಗಿ ಕಾರ್ಯ ನಿರ್ವಹಿಸಿದರು. ಪಿಡಿಒ ರತ್ನಮ್ಮ, ಕಾರ್ಯದರ್ಶಿ ಮಂಜುನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT