ಯಲಬುರ್ಗಾ (ಕೊಪ್ಪಳ ಜಿಲ್ಲೆ): ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ನಂ.1 ಶಾಲೆಯಲ್ಲಿ ಎರಡು ಚೀಲ ತೊಗರಿ ಬೇಳೆ ಕಳ್ಳತನವಾಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡದೇ ನಿರ್ಲಕ್ಷಿಸಿದ್ದಾರೆ ಎಂಬ ಆರೋಪದ ಮೇಲೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಶಾಲೆಯ ಮುಖ್ಯ ಶಿಕ್ಷಕ ರುದ್ರಗೌಡ ಗೋಣಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ ಅಮಾನತು ಮಾಡಿದ್ದಾರೆ.