ಕನಕಗಿರಿ: ‘ಆರೋಗ್ಯವೇ ಮಹಾ ಭಾಗ್ಯವಾಗಿದ್ದು, ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ಮಾಡಬಾರದು’ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ತಿಳಿಸಿದರು.

ತಾಲ್ಲೂಕಿನ ಗೌರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತಾಂಡಾ ಗ್ರಾಮದ ನರೇಗಾ ಕಾಮಗಾರಿ ಸ್ಥಳದಲ್ಲಿ ನಡೆದ ಆರೋಗ್ಯ ಶಿಬಿರದಲ್ಲಿ ಮಾತನಾಡಿ,‘ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಬಡ ಕೂಲಿಕಾರರಿಗೆ ಉಚಿತ ಆರೋಗ್ಯ ಶಿಬಿರದಿಂದ ತುಂಬಾ ಅನುಕೂಲವಾಗಿದೆ’ ಎಂದರು.

ತಾಲ್ಲೂಕು ಐಇಸಿ ಸಂಯೋಜಕ ಶಿವಕುಮಾರ.ಕೆ ಮಾತನಾಡಿ,‘ಉದ್ಯೋಗ ಖಾತ್ರಿ ಕೂಲಿ 2025ರ ಏ.1ರಿಂದ ₹349 ಯಿಂದ ₹370ಗೆ ಹೆಚ್ಚಳವಾಗಿದೆ. ಕೂಲಿಕಾರರು ಗ್ರಾ.ಪಂಗೆ ಕೆಲಸದ ಬೇಡಿಕೆ ಸಲ್ಲಿಸಿ, ಕೆಲಸ ಪಡೆಯಬೇಕು’ ಸಲಹೆ ನೀಡಿದರು.

ತಾಂತ್ರಿಕ ಸಂಯೋಜಕ ಸಯ್ಯದ್ ತನ್ವೀರ್ ಮಾತನಾಡಿ,‘ಕೂಲಿಕಾರರಿಗೆ ಬೇಸಿಗೆ ಹಿನ್ನೆಲೆಯಲ್ಲಿ ಕೆಲಸದಲ್ಲಿ ಶೇ 30ರಷ್ಟು ವಿನಾಯಿತಿ ಇದ್ದು, ಕೂಲಿಕಾರರು ವಿನಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕು. ತಾಂತ್ರಿಕ ಸಿಬ್ಬಂದಿ ನೀಡಿದ ಅಳತೆಗನುಸಾರವಾಗಿ ಕೆಲಸ ನಿರ್ವಹಿಸುವ ಮೂಲಕ ಪೂರ್ಣ ಕೂಲಿ ಹಣ ಪಡೆಯಬೇಕು’ ಎಂದು ತಿಳಿಸಿದರು.

ಬಿ.ಪಿ., ಶುಗರ್ ಹಾಗೂ ಆರೋಗ್ಯ ತಪಾಸಣೆ ನಡೆಸಲಾಯಿತು.

ಗ್ರಾ.ಪಂ ಸದಸ್ಯರಾದ ಅಮರೇಶ ಚವ್ಹಾಣ್, ಕಾರ್ಯದರ್ಶಿ ಶಿವರಾಜ ಪಾಟೀಲ, ಸಮುದಾಯ ಆರೋಗ್ಯ ಅಧಿಕಾರಿ ಭಾಗ್ಯ, ಅಶಾ ಕಾರ್ಯಕರ್ತೆ ಉಮಾದೇವಿ, ಡಿಇಒ ಮೋಹನ್, ಗ್ರಾಮ ಕಾಯಕ ಮಿತ್ರ ಹುಲಿಗೆಮ್ಮ, ಗ್ರಾ.ಪಂ ಸಿಬ್ಬಂದಿ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.